CHITRADURGA NEWS | 14 DECEMBER 2025
ಚಿತ್ರದುರ್ಗ: ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಬೇಕು ಎಂದು ಡಯಟ್ ಹಿರಿಯ ಉಪನ್ಯಾಸಕ ತಿಪ್ಪೇಸ್ವಾಮಿ ಹೇಳಿದರು.
ಇದನ್ನೂ ಓದಿ: ಕೇಂದ್ರದ ನೀತಿ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ
ನಗರದ ಡಯಟ್‌ನಲ್ಲಿ ಜ್ಞಾನಸೇತು, ಮಕ್ಕಳ ಹಕ್ಜುಗಳು, ಮೌಲ್ಯಶಿಕ್ಷಣ ವಿಷಯ ಕುರಿತು ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕರಿಗೆ ಶನಿವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.
ಶಿಕ್ಷಕರು ಪ್ರಯೋಗಾಧಾರಿತ ಚಟುವಟಿಕೆ ಮೂಲಕ ವಿಜ್ಞಾನ ವಿಷಯವನ್ನು ಬೋಧಿಸಬೇಕು. ಇದರಿಂದ ವಿಷಯದ ಪರಿಕಲ್ಪನೆಗಳನ್ನು ವಿದ್ಯಾರ್ಥಿಗಳು ಸುಲಭವಾಗಿ ಗ್ರಹಿಸಲು ಸಹಕಾರಿಯಾಗುತ್ತದೆ ಎಂದರು.
ನೋಡಲ್ ಅಧಿಕಾರಿ ಪದ್ಮ ಮಾತನಾಡಿ, ಶಿಕ್ಷಕರಿಗೆ ತಾಂತ್ರಿಕ ಜ್ಞಾನದ ಅರಿವು ಅಗತ್ಯ. ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಬೋಧನೆಯಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲು ಡಯಟ್ ವತಿಯಿಂದ ತರಬೇತಿ ನೀಡಲಾಗುತ್ತಿದೆ. ತರಗತಿ ನಿರ್ವಹಣೆಯಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಕಲಿಕೆಗೆ ಪೂರಕವಾಗಿ ತಂತ್ರಜ್ಞಾನ ಬಳಸಲು ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 13 ಡಿಸೆಂಬರ್ | ತೀರ್ಥಹಳ್ಳಿ ಮಾರುಕಟ್ಟೆ ರೇಟ್
ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ, ಉಪನ್ಯಾಸಕ ಎಸ್.ಬಸವರಾಜು, ಮಂಜುಳಾ, ಸಿಆರ್‌ಪಿ ವರಲಕ್ಷ್ಮಿ ಮತ್ತು 6 ತಾಲೂಕಿನ ವಿಜ್ಞಾನ ವಿಷಯ ಬೋಧಕರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
