
CHITRADURGA NEWS | 25 SEPTEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳಿಗೆ ಕೆ.ಎಸ್.ಒ.ಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಹಾಗೂ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.
ಇದನ್ನೂ ಓದಿ: ಜಿ.ಆರ್.ಹಳ್ಳಿ ಪಿಜಿ ಸೆಂಟರ್ ಅನ್ನು ಮೆಡಿಕಲ್ ಕಾಲೇಜಿಗೆ ಕೊಡಿ | ಹೊಸ ಡಿಸಿ ಕಚೇರಿಗೆ ವಿವಿ ಸ್ಥಳಾಂತರಿಸಿ

ಅಭ್ಯರ್ಥಿಗಳಿಗೆ ಈ 50 ದಿನಗಳ ಸ್ಪರ್ಧಾತ್ಮಕ ತರಬೇತಿಯಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಜ್ಞಾನ ಹಾಗೂ ಕೌಶಲ್ಯವನ್ನು ಒದಗಿಸುತ್ತದೆ. ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ನೋಂದಣಿ ಮಾಡಿಕೊಳ್ಳಬೇಕು. ನೋಂದಾವಣೆಯನ್ನು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕಛೇರಿ ಸಮಯದಲ್ಲಿ ನೋಂದಾಯಿಸಲು ಸೆ.30 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08212515944 ಅಥವಾ 9964760090 ಗೆ ಕರೆ ಮಾಡಿ ಸಮಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ನವೀನ್‍ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
