CHITRADURGA NEWS | 11 AUGUST 2026
ಚಿತ್ರದುರ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಇದೇ ಆಗಸ್ಟ್ 13 ಮತ್ತು 14 ರಂದು ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದಲ್ಲಿರುವ ಪಶು ಆಸ್ಪತ್ರೆ ಆವರಣದ ‘ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ’ದಲ್ಲಿ ‘ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
ಆಸಕ್ತ ರೈತರು ಮುಂಚಿತವಾಗಿ ವಾಟ್ಸಾಪ್ ಮೂಲಕ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಫೋರ್ಟ್ ಸೈಜ್ ಫೋಟೊ ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿಯನ್ನು ತರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರದ ಪ್ರತಿಯನ್ನು ತರತಕ್ಕದ್ದು. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಪ್ರೋತ್ಸಾಹಧನ ನೀಡಲಾಗುವುದಿಲ್ಲ.
ಇದನ್ನೂ ಓದಿ: ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 9886803637, 9972965479, 9886002248 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

