CHITRADURGA NEWS | 22 MARCH 2026
ಚಿತ್ರದುರ್ಗ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರ್ಮ್ ನಲ್ಲಿ ಮಾರ್ಚ್ 24 ರಿಂದ 26ರವರೆಗೆ ಕೃಷಿ ಆಯುಕ್ತಾಲಯ ರಾಜ್ಯ ವಲಯ ಯೋಜನೆಯ ರೈತರು ಮತ್ತು ವಿಸ್ತರಣಾಧಿಕಾರಿಗಳ ತರಬೇತಿ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತ ಬಾಂಧವರಿಗೆ 3 ದಿನಗಳ ಉಚಿತ ವಸತಿ ಸಹಿತ ಸುಸ್ಥಿರ ಲಾಭದಾಯಕ ಸಮಗ್ರ ಕೃಷಿ ಪದ್ಧತಿ ಕುರಿತು ತರಬೇತಿ ಆಯೋಜಿಸಲಾಗಿದೆ.
ಇದನ್ನೂ ಓದಿ: ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು
ತರಬೇತಿ ಕಾರ್ಯಗಾರದಲ್ಲಿ ರೈತರಿಗೆ ಮೊದಲನೇ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ, ಗುಳಗೊಂಡನಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ನಾಗರಾಜಪ್ಪ ಎರೆ ಗೊಬ್ಬರ ತಯಾರಿಕೆ ಮತ್ತು ಹಿರಿಯೂರಿನ ಪ್ರಗತಿಪರ ಕೃಷಿಕರಾದ ಶ್ರೀನಿವಾಸ್ ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಕುರಿತು ತಮ್ಮ ಅನುಭವವನ್ನು ಹಂಚಿಕೊಳ್ಳುವರು.
ಎರಡನೇ ದಿನ ಹಿರಿಯೂರಿನ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ನಾಗರಾಜ್ ಅವರು ವೈಜ್ಞಾನಿಕ ಹೈನುಗಾರಿಕೆ ಹಾಗೂ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಮಾಹಿತಿ ನೀಡುವರು.
ತರಬೇತಿಯ ಮೂರನೇ ದಿನ ತಿಪಟೂರಿನ ಅಕ್ಷಯಕಲ್ಪ ಸಂಸ್ಥೆಯ ವಿವಿಧ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ಧತಿಗಳ ಪ್ರಾತ್ಯಕ್ಷಿಕೆ ತಾಕಿಗೆ ಭೇಟಿ ನೀಡಿ ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು.
ಇದನ್ನೂ ಓದಿ: ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್
ಜಿಲ್ಲೆಯ ಆಸಕ್ತ 45 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ: 8277931058 ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು. ಆಧಾರ್ ಅಥವಾ ಎಫ್ ಐ ಡಿ ಯೊಂದಿಗೆ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
