
CHITRADURGA NEWS | 16 FEBRUARY 2026
ಚಿತ್ರದುರ್ಗ: ಹಿರಿಯೂರಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.17 ರಿಂದ 19 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ಕುರಿತು ಪರಿಶಿಷ್ಟ ಜಾತಿ (ಎಸ್.ಸಿ) ರೈತರಿಗೆ ಮೂರು ದಿನಗಳ ಉಚಿತ ವಸತಿ ಸಹಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 16 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ತರಬೇತಿ ಕಾರ್ಯಗಾರದಲ್ಲಿ ರೈತರಿಗೆ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಹಾಗೂ ಸಮಗ್ರ ಪೀಡೆ ನಿರ್ವಹಣೆ, ಜೇನು ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ಧತಿ ಕುರಿತು ಮಾಹಿತಿ ನೀಡಲಾಗುವುದು.
ಆದ ಪ್ರಯುಕ್ತ ಆಸಕ್ತ ಪರಿಶಿಷ್ಟ ಜಾತಿ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
