
CHITRADURGA NEWS | 22 DECEMBER 2025
ಚಿತ್ರದುರ್ಗ: ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ಡಿ.23ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಎದುರಿಗಿರುವ ಮಾರುಕಟ್ಟೆ ಆವರಣದ ಗೋದಾಮಿನಲ್ಲಿ ಜಿಲ್ಲೆಯ ಕೃಷಿಕರಿಗೆ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸಂಸದರು, ಶಾಸಕರ ಅನುದಾನದ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ | ADC ಕುಮಾರಸ್ವಾಮಿ

ತರಬೇತಿ ಕಾರ್ಯಕ್ರಮದಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್‍ನ ತುಮಕೂರಿನ ತಾಂತ್ರಿಕ ಅಧಿಕಾರಿಯಾದ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ನಂತರ ಕೋಗುಂಡೆ ಗ್ರಾಮದ ರೈತರಾದ ಲೋಕೇಶ್ ಎಚ್ ಸಿ ಇವರು ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಸಿ ಬಳಸುತ್ತಿರುವ ತಮ್ಮ ಅನುಭವವನ್ನು ತಿಳಿಸುವರು.
ಆದ ಪ್ರಯುಕ್ತ ಆಸಕ್ತ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಸದರಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಇದನ್ನೂ ಓದಿ: ಒಳಪಂಗಡಗಳು ವೀರಶೈವ – ಲಿಂಗಾಯತ ಮಹಾಸಭಾ ಜೊತೆ ನಿಲ್ಲಬೇಕು | ಕೆ.ಎಸ್.ನವೀನ್
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಕೋರಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
