CHITRADURGA NEWS | 26 MARCH 2026
ಚಿತ್ರದುರ್ಗ: ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಇದೇ ಮಾರ್ಚ್ 28ರಂದು ಬೆಳಿಗ್ಗೆ 10ಕ್ಕೆ ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಹೋಬಳಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 25 ಮಾರ್ಚ್ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್
ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಿದ್ದು, ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗೆ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ನೀಡಲಾಗುವುದು.
ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೆಟ್ ಲಿಮಿಟೆಡ್‍ನ ತಾಂತ್ರಿಕ ಅಧಿಕಾರಿ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೊಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.
ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಸಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಇದನ್ನೂ ಓದಿ: SSLC ಪರೀಕ್ಷೆ | ಇಂಗ್ಲಿಷ್ ವಿಷಯದಲ್ಲಿ 493 ವಿದ್ಯಾರ್ಥಿಗಳು ಗೈರು
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು. ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಮನವಿ ಮಾಡಲಾಗಿದೆ.
ನೋಂದಣಿಯಾಗಿ ತರಬೇತಿಯಲ್ಲಿ ಭಾಗವಹಿಸುವ ರೈತ ಬಾಂಧವರಿಗೆ ಅಡಿಕೆ ಸಿಪ್ಪೆ ಕಾಂಪೋಸ್ಟ್ ಕಲ್ಚರ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
