
CHITRADURGA NEWS | 27 NOVEMBER 2025
ಚಿತ್ರದುರ್ಗ: ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ನ.28ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕಿ ಸಮುದ್ರದಹಳ್ಳಿ ಗ್ರಾಮದಲ್ಲಿ ಜಿಲ್ಲೆಯ ಕೃಷಿಕರಿಗೆ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಕ್ರೀಡೆಯು ಒತ್ತಡ ಮೀರಿ ಬೆಳೆಯಲು ಸಹಕಾರಿ | ನ್ಯಾ.ರೋಣ್ ವಾಸುದೇವ್
ತರಬೇತಿ ಕಾರ್ಯಕ್ರಮದಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್ ಲಿ ತುಮಕೂರಿನ ತಾಂತ್ರಿಕ ಅಧಿಕಾರಿ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.
ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಲು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಇದನ್ನೂ ಓದಿ: ನಾಳೆ ಚಿತ್ರದುರ್ಗ ನಗರಸಭೆಯ ಆಯ-ವ್ಯಯ ತಯಾರಿ ಸಾರ್ವಜನಿಕ ಸಲಹಾ ಸೂಚನಾ ಸಭೆ
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಲು ಕೋರಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
