
CHITRADURGA NEWS | 15 SEPTEMBER 2025
ಹಿರಿಯೂರು: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಸೆಪ್ಟಂಬರ್ 18 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ಕುರಿತು ಒಂದು ದಿನದ ತರಬೇತಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಮೆಕ್ಕೆಜೋಳ ರೇಟ್ ಎಷ್ಟಿದೆ?
ತರಬೇತಿಯಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮ ಜೀವಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಗೊರಪ್ಪನವರ ಭರಮಪ್ಪ, ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಬೆಳೆಯುವ ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.
ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ಜೆ.ಎಂ. ಸರಸ್ವತಿ ಅವರು ಅಣಬೆ ಮೌಲ್ಯವರ್ಧನೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಯಶಸ್ವಿಯಾಗಿ ಅಣಬೆ ಬೆಳೆದ ರೈತರು ತಮ್ಮ ಅಣಬೆ ಕೃಷಿಯ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು.
ಆಸಕ್ತ 50 ಜನ ರೈತಭಾಂದವರು ಸದರಿ ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳುವಂತೆ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಪಜಾತಿ ಕಾಲಂನಲ್ಲಿ ಕುಂಚಿಟಿಗ ಎಂದು ನಮೂದಿಸಿ | ಎಸ್.ಲಿಂಗಮೂರ್ತಿ
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಖಡ್ಡಾಯವಾಗಿ ತಮ್ಮ ಎಫ್‌ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರತಕ್ಕದ್ದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

