
CHITRADURGA NEWS | 18 JANUARY 2026
ಚಿತ್ರದುರ್ಗ: ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಶಿಕ್ಷಕರು ಕೌಟುಂಬಿಕ ವಾತಾವರಣ ನಿರ್ಮಿಸಿಕೊಳ್ಳಬೇಕು ಎಂದು ಡಯಟ್ ಹಿರಿಯ ಉಪನ್ಯಾಸಕ ತಿಪ್ಪೇಸ್ವಾಮಿ ಹೇಳಿದರು.
ಇದನ್ನೂ ಓದಿ: ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಡಯಟ್‌ನಲ್ಲಿ ಜಿಲ್ಲೆಯ ಪೂರ್ವ ಪ್ರಾಥಮಿಕ ಶಾಲೆಯ(ಎಲ್ ಕೆ ಜಿ ಮತ್ತು ಯು ಕೆ ಜಿ) ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,
ಮಗುವಿನ ಮನಸ್ಸು ಬಿಳಿಯ ಹಾಳೆಯಂತೆ ಶುಭ್ರವಾಗಿರುತ್ತದೆ. ನಾವು ಯಾವ ವಿಷಯವನ್ನು ಕಲಿಸುತ್ತೇವೆಯೋ ಮಗು ಅದೇ ವಿಷಯವನ್ನು ಯಥಾವತ್ತಾಗಿ ಸ್ವೀಕರಿಸುತ್ತದೆ. ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದ್ದು ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳಿಗೆ ಮೌಲ್ಯಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ನೋಡಲ್ ಅಧಿಕಾರಿ ಎಲ್.ರೇವಣ್ಣ ಮಾತನಾಡಿ, ಪ್ರತಿ ಮಗುವಿಗೆ ಶಿಕ್ಷಣ ಅಗತ್ಯವಾಗಿದೆ. ಚಟುವಟಿಕೆ ಆಧಾರಿತ ತರಬೇತಿಯನ್ನು ಎಪಿಎಫ್ ವತಿಯಿಂದ ನೀಡಲಾಗಿದೆ.
ಇದನ್ನೂ ಓದಿ: ಕಳೆದ ಲೋಕ್ ಅದಾಲತ್‍ನಲ್ಲಿ 79,477 ಪ್ರಕರಣಗಳು ಇತ್ಯರ್ಥ | ನ್ಯಾ.ರೋಣ್ ವಾಸುದೇವ್
ಮಕ್ಕಳಿಗೆ ಕಲಿಸಲು ಪೂರಕವಾದ ಚಿಲಿಪಿಲಿ ಸಾಹಿತ್ಯವನ್ನು ಬಳಸಿಕೊಂಡು ತರಗತಿಗಳಲ್ಲಿ ಶಿಕ್ಷಕರು ಪರಿಣಾಮಕಾರಿಯಾಗಿ ಬೋಧಿಸಬೇಕು. ತರಬೇತಿಯಲ್ಲಿ ಕಲಿತ ಅಂಶಗಳನ್ನು ತರಗತಿ ಕೋಣೆಯಲ್ಲಿ ಅನುಷ್ಟಾನ ಮಾಡುವ ಮೂಲಕ ಅಭಿವ್ಯಕ್ತಿ ಸಾಮರ್ಥ್ಯ ಬೆಳೆಸಬೇಕು ಎಂದರು.
ಉಪನ್ಯಾಸಕ ಎಸ್.ಬಸವರಾಜು ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಮಗು ಸುಶಿಕ್ಷಿತ ಪ್ರಜೆಯಾಗಿ ಭವಿಷ್ದದ ಜೀವನವನ್ನು ರೂಪಿಸಿಕೊಳ್ಳಲು ಬಾಲ್ಯದ ಆರೈಕೆ ಶಿಕ್ಷಣ ಪರಿಣಾಮಕಾರಿಯಾಗಿರಬೇಕು ಎಂದರು.
ಭವಿಷ್ದದ ಉನ್ನತ ಶಿಕ್ಷಣ ಪಡೆಯಲು ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳ ಸ್ನೇಹಿ ಕಲಿಕಾ ವಾತಾವರಣ ಸೃಜಿಸಿಕೊಂಡು ಕತೆ, ಹಾಡು, ನೃತ್ಯ, ಚಿತ್ರಗಳು, ಮಾದರಿಗಳು, ಚಟುವಟಿಕೆಗಳನ್ನು ಬಳಸಿ ಮಕ್ಕಳಲ್ಲಿ ಕಲಿಕಾ ಆಸಕ್ತಿ ಬೆಳೆಸಬೇಕು. ಶಿಕ್ಷಕರಿಗೆ ಸಹಾನುಭೂತಿ ಗುಣ ಅಗತ್ಯವಾಗಿದ್ದು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ:
ಸಂಪನ್ಮೂಲ ವ್ಯಕ್ತಿಗಳಾದ ಪುನೀತ್, ಹರೀಶ್, ಸುಮಂಗಳ ಮತ್ತು ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಕರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
