CHITRADURGA NEWS | 08 APRIL 2026
ಹೊಸದುರ್ಗ: ಶಿಕ್ಷಕರು ಧನಾತ್ಮಕ ಚಿಂತನೆ ರೂಢಿಸಿಕೊಂಡಾಗ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಚಿತ್ರದುರ್ಗ ಡಯಟ್‌ನ ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ವೀಕ್ಷಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಪಟ್ಟಣದ ಕೆಕೆಬಿಜಿವಿಯಲ್ಲಿ ಡಯಟ್, ಬಿ.ಇ.ಓ, ಬಿಆರ್‌ಸಿ ಕಚೇರಿ ಸಹಯೋಗದಲ್ಲಿ ದ್ವಿಭಾಷಾ ತರಗತಿ ಬೋಧನೆ ಕುರಿತು ತಾಲೂಕಿನ 1 ರಿಂದ 5 ನೇ ತರಗತಿಯ ಸರ್ಕಾರಿ ಪ್ರಾ.ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಬೋಧನಾ ವಿಧಾನದಲ್ಲಿ ಬದಲಾವಣೆಯಾದಂತೆ ಶಿಕ್ಷಕರು ಧನಾತ್ಮಕ ಮನೋಭಾವದಿಂದ ಹೊಸತನವನ್ನು ಸ್ವೀಕರಿಸಿ ತರಗತಿಯಲ್ಲಿ ಅನುಷ್ಟಾನ ಮಾಡಿದಾಗ ಗುಣಮಟ್ಟದ ಕಲಿಕೆ ಸಾಧ್ಯವಾಗುತ್ತದೆ ಎಂದರು.
ಉಪನ್ಯಾಸಕ ಎಸ್. ಬಸವರಾಜು ಮಾತನಾಡಿ, ಭಾಷೆ ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಿಪಡಿಸುವ ಸಾಧನವಾಗಿದೆ. ಯಾವುದೇ ಭಾಷೆಯನ್ನು ಕಲಿಯಲು ಮಕ್ಕಳಿಗೆ ಭಾಷಾ ಕೌಶಲ್ಯಗಳಲ್ಲಿ ಪರಿಣಿತಿ ಬೆಳೆಸುವ ಮೂಲಕ ಅಭಿವ್ಯಕ್ತಿ ಸಾಮರ್ಥ್ಯ ಬೆಳೆಸಬೇಕು.
ಇದನ್ನೂ ಓದಿ: ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಮನೆಯಲ್ಲಿ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?
ಯಾಂತ್ರಿಕವಾಗಿ ಭಾಷೆ ಕಲಿಸಿದರೆ ಅದು ಹೆಚ್ಚು ಕಾಲ ನೆನಪಿನಲ್ಲಿ ಉಳಿಯುವುದಿಲ್ಲ. ಪ್ರಾಥಮಿಕ ಹಂತದಲ್ಲಿಯೇ ಪರಿಣಾಮಕಾರಿಯಾಗಿ ಕಲಿಸಿದರೆ ಭಾಷೆಯಲ್ಲಿ ಮಕ್ಖಳು ಪರೀಣಿತಿ ಪಡೆಯುತ್ತಾರೆ ಎಂದು ತಿಳಿಸಿದರು.
ಉಪನ್ಯಾಸಕ ರಾಮಚಂದ್ರಪ್ಪ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಅಗತ್ಯವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಹೊರ ರಾಷ್ಟçಗಳಲ್ಲಿ ಸಂವಹನ ನಡೆಸಲು ಇಂಗ್ಲಿಷ್ ಕಲಿಯುವುದು ಅಗತ್ಯವಾಗಿದೆ ಎಂದರು.
ಬಿ.ಆರ್.ಸಿ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ಪಿ.ಎಂ.ಶ್ರೀ, ಕೆ.ಪಿ.ಎಸ್, ಪ್ರಾಥಮಿಕ ಶಾಲೆಗಳನ್ನೊಳಗೊಂಡಂತೆ 659 ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. 5 ದಿನಗಳ ತರಬೇತಿಯಲ್ಲಿ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್ | ಯಾವ ಅಡಿಕೆಗೆ ಎಷ್ಟು ರೇಟ್
ಈ ವೇಳೆ ಪ್ರಕಾಶ್, ಹೊನ್ನಪ್ಪ, ಶಿಕ್ಷಣ ಸಂಯೋಜಕ ಆನಂದಪ್ಪ, ಬಿ.ಆರ್.ಪಿ ರುದ್ರೇಶ್, ಸಿ.ಆರ್.ಪಿ. ಸುಜಾತ, ರಾಜಪ್ಪ, ಸುರೇಂದ್ರನಾಯ್ಕ್, ಪ್ರಾಥಮಿಕ ಶಾಲಾ ಶಿಕ್ಷಕರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
