ಮುಖ್ಯ ಸುದ್ದಿ
ಬಾಳೆದಿಂಡಿನಿಂದ ನಾರು ಸಂಸ್ಕರಣೆ ತರಬೇತಿ ಕಾರ್ಯಾಗಾರ | ಕೂಡಲೇ ಅರ್ಜಿ ಸಲ್ಲಿಸಿ
ಚಿತ್ರದುರ್ಗನ್ಯೂಸ್.ಕಾಂ
ಜಿಲ್ಲೆಯ ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಉಳ್ಳವರು ಮತ್ತು ಕುಶಲಕರ್ಮಿಗಳಿಗಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯ, ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ-ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‌ಮೆಂಟ್ ಸಂಯುಕ್ತಾಶ್ರಯದಲ್ಲಿ ‘ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ’ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ 8 ರಿಂದ 12 ರವರೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇದು ಐದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಜ.6ರೊಳಗೆ ಗಣೇಶ್ ತೋಳಾರ್ 7349695100 ಹಾಗೂ ಕೋಟೇಶ್ ಕೊರವರ 9663364234 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗಿದೆ. ಅಭ್ಯರ್ಥಿಗಳು ನೋಂದಾಯಿಸಿದ ನಂತರ ಸಂಸ್ಥೆಯು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಭ್ಯರ್ಥಿಗಳಿಗೆ ತಿಳಿಸುತ್ತದೆ. ಆಯ್ಕೆ ಆದ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬೇಕು. ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತಾ ಕೇಂದ್ರದ ಕಾರ್ಯಕ್ರಮ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ಕೋರಿದ್ದಾರೆ.