
CHITRADURGA NEWS | 12 DECEMBER 2025
ಚಿತ್ರದುರ್ಗ: ರಂಗಯ್ಯನಬಾಗಿಲು ಹತ್ತಿರವಿರುವ ತಿಪ್ಪಿನಘಟ್ಟಮ್ಮ ದೇವಸ್ಥಾನ ಸಮೀಪ ಟ್ರಾನ್ಸ್‌ಫಾರ್ಮರ್ ಮಕ್ಕಳ ಕೈಗೆಟುಕುವಂತಿರುವುದರಿಂದ ಅನಾಹುತ ಸಂಭವಿಸುವ ಮೊದಲೇ ಬೇರೆ ಕಡೆ ಸ್ಥಳಾಂತರಿಸುವಂತೆ ಅಲ್ಲಿನ ನಿವಾಸಿಗಳು ವಿದ್ಯುತ್ ಇಲಾಖೆಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 12 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಟ್ರಾನ್ಸ್‌ಫಾರ್ಮರ್ ಅಳವಡಿಸಿದ ಮೇಲೆ ಯಾವುದೇ ಅಪಾಯಗಳಾಗದಂತೆ ಸುತ್ತ ತಂತಿ ಬೇಲಿಯನ್ನು ಅಳವಡಿಸಬೇಕು. ಇದ್ಯಾವುದರ ಬಗ್ಗೆ ಬೆಸ್ಕಾಂನವರಿಗೆ ಪರಿವೆಯಿಲ್ಲದಂತಾಗಿದೆ.
ದಿನವಿಡೀ ಮಕ್ಕಳು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಳಿ ಆಟವಾಡುತ್ತಿರುತ್ತಾರೆ. ಆಕಸ್ಮಿಕವಾಗಿ ವಿದ್ಯುತ್ ತಗುಲಿದರೆ ಪ್ರಾಣ ಹಾನಿಯಾಗುವ ಸಾಧ್ಯತೆಗಳಿರುವುದನ್ನು ಮನಗಂಡು ಐದಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.
ಇದನ್ನೂ ಓದಿ: SSC | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇನ್ನಾದರೂ ವಿದ್ಯುತ್ ಇಲಾಖೆಯವರು ಎಚ್ಚೆತ್ತುಕೊಂಡು ಟ್ರಾನ್ಸ್‌ಫಾರ್ಮರ್ ರನ್ನು ಬೇರೆ ಕಡೆ ಶಿಫ್ಟ್ ಮಾಡುವಂತೆ ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥಗೊಪ್ಪೆ ಹಾಗೂ ಜಿಮ್ಮಿ ಇವರುಗಳು ಬೆಸ್ಕಾಂಗೆ ಒತ್ತಾಯಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
