CHITRADURGA NEWS | 28 MAY 2026
ಚಿತ್ರದುರ್ಗ: ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ಧಿಗೆ ತರಬೇತಿಗಳು ಸಹಕಾರಿಯಾಗುತ್ತವೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
ಡಿ.ಎಸ್.ಇ.ಆರ್.ಟಿ ಮತ್ತು ಡಯಟ್ ವತಿಯಿಂದ ದ್ವಿಭಾಷಾ ತರಗತಿಗಳ ಬೋಧನೆಯನ್ನು ಅನುಕೂಲಿಸಲು ಡಯಟ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಹಂತದ ಎಂ.ಆರ್.ಪಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಬೋಧನೆಯಲ್ಲಿ ಹೊಸತನವನ್ನು ರೂಢಿಸಿಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಅನುಗುಣವಾಗಿ ತರಬೇತಿಗಳ ಮೂಲಕ ವೃತ್ತಿ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಜಿಲ್ಲೆಯಲ್ಲಿ ಎಲ್ಲಾ ಕೆಪಿಎಸ್, ಪಿಎಂಶ್ರೀ ಶಾಲೆಗಳು, ದ್ವಿಭಾಷಾ ತರಗತಿ ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿರುವ 1 ರಿಂದ 5 ನೇ ತರಗತಿ ಶಿಕ್ಷಕರಿಗೆ 5 ದಿನಗಳ ತರಬೇತಿ ನೀಡಲಾಗಿದೆ.
ಪ್ರಸ್ತುತ ವಿದ್ಯಾರ್ಥಿಗಳನ್ನು ದ್ವಿಭಾಷಾ ಕಲಿಕೆಗೆ ಸಜ್ಜುಗೊಳಿಸಲು ಕನ್ನಡ, ಇಂಗ್ಲಿಷ್, ಗಣಿತ ಮತ್ತು ಪರಿಸರ ಅಧ್ಯಯನ ವಿಷಯಗಳಿಗೆ ಖಿಖಂಓSIಖಿIಔಓ ಮಾಡ್ಯೂಲ್ ತರಬೇತಿಯನ್ನು ಶಿಕ್ಷಕರಿಗೆ ನೀಡಲಾಗುತ್ತಿದೆ. ತಾಲೂಕು ಹಂತದಲ್ಲಿ ಎಂ.ಆರ್.ಪಿಗಳು ಎಲ್ಲಾ ಶಿಕ್ಷಕರಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಬೇಕು. ಶಿಕ್ಷಕರು ತರಬೇತಿಯಲ್ಲಿನ ಅಂಶಗಳನ್ನು ತರಗತಿ ಕೋಣೆಯಲ್ಲಿ ಅನುಷ್ಟಾನ ಮಾಡಿ ದ್ವಿಭಾಷಾ ತರಗತಿ ನಿರ್ವಹಣೆ ಮಾಡಬೇಕು ಎಂದರು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ
ನೋಡಲ್ ಅಧಿಕಾರಿಗಳಾದ ಅಶ್ವಥ್‌ನಾರಾಯಣ, ಅರ್ಜುಮಂದ್ ಬಾನು, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜಿ ನಾಗರಾಜು, ಸಿ.ಬಿ ಮಂಜುನಾಥ್, ಸಿ.ಎಂ.ಸುಂದರ್‌ರಾಜ್, ವಿ.ರಾಧಾ, ಕೆ.ಜಿ ರಂಜಿತಾ, ಪ್ರಕಾಶ್ ಮತ್ತು ತಾಲೂಕು ಹಂತದ ಎಂ.ಆರ್.ಪಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
