ಮುಖ್ಯ ಸುದ್ದಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಖಜಾನೆ ಲೂಟಿಯಾಗುತ್ತಿದೆ | ಗೋವಿಂದ ಕಾರಜೋಳ

CHITRADURGA NEWS | 01 june 2024
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಖಜಾನೆ ಲೂಟಿಯಾಗುತ್ತಿದೆ. ಶಿಕ್ಷಕರು, ಪದವೀಧರರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್‍ಗೆ ಕಾಳಜಿಯಿಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಇದನ್ನೂ ಓದಿ: ಹೊಸನಗರ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆಯಲ್ಲಿ ಜಿಗಿತ
ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರ ಪರ ಸಂತ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಮತ ಯಾಚಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಲ್ಲಾ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರುಗಳಲ್ಲಿ ಮತಯಾಚಿಸುತ್ತಿದ್ದೇವೆ. ಐದನೆ ವೇತನ ಹಾಗೂ ಆರನೇ ವೇತನ ಆಯೋಗವನ್ನು ಜಾರಿಗೆ ತಂದಿದ್ದು, ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರ್ಕಾರಕ್ಕೆ ಏಳನೆ ವೇತನ ಆಯೋಗ ಜಾರಿಗೆ ತರುವ ಮನಸ್ಸಿಲ್ಲ ಎಂದರು.
ಇದನ್ನೂ ಓದಿ: ಕವಾಡಿಗರಹಟ್ಟಿ ಹಾಗೂ ಯೂನಿಯನ್ ಪಾರ್ಕ್ ಕಾರ್ನರ್ ನಲ್ಲಿರುವ ರಾಜಕಾಲುವೆ ಒತ್ತುವರಿ ತೆರವು
ವೈ.ಎ.ನಾರಾಯಣಸ್ವಾಮಿರವರು ಕಳೆದ ಹದಿನೆಂಟು ವರ್ಷಗಳಿಂದಲೂ ಶಿಕ್ಷಕರುಗಳ ಸಮಸ್ಯೆಗಳ ವಿರುದ್ದ ಹೋರಾಟ ಮಾಡುತ್ತಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಯನ್ನು ಸಿಬಐಗೆ ವಹಿಸದೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಂಡತನ ತೋರುತ್ತಿದೆ. ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ಎಚ್ಚರಿಸಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದದಿಂದ ಬೇರೆ ಬೇರೆ ಬ್ಯಾಂಕ್‍ಗಳಿಗೆ 180 ಕೋಟಿ ರೂ. ವರ್ಗಾವಣೆಯಾಗಿದ್ದು, ಹೈದರಾಬಾದ್, ತೆಲಂಗಾಣಕ್ಕೆ ಹಣ ಹೋಗಿರುವ ಗುಮಾನಿಯಿದೆ. ಮುಖ್ಯಮಂತ್ರಿ ಬಾಯಿ ತೆರೆಯುತ್ತಿಲ್ಲ. ಇಷ್ಟೊತ್ತಿಗೆ ಸಚಿವ ನಾಗೇಂದ್ರರವರಿಂದ ರಾಜೀನಾಮೆ ಪಡೆದು ಸಚಿವ ಸಂಪುಟದಿಂದ ಕೈಬಿಡಬೇಕಿತ್ತು. ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ನಿಜವಾಗಿಯೂ ನಾಚಿಕೆಗೇಡಿನ ಸಂಗತಿ ಎಂದು ತರಾಟೆ ತೆಗೆದುಕೊಂಡರು.
ಇದನ್ನೂ ಓದಿ: ನರೇಗಾ ಕೂಲಿಗಾರರಿಗೆ ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ
ವೈ.ಎ.ನಾರಾಯಣಸ್ವಾಮಿ ಪರ ಮತಯಾಚಿಸಿ ಮಾತನಾಡಿದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಇದುವರೆಗೂ ಕಾಂಗ್ರೆಸ್ ಗೆದ್ದಿರುವುದನ್ನು ನೋಡಿಲ್ಲ. ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿರವರು ಕಳೆದ ಹದಿನೆಂಟು ವರ್ಷಗಳಿಂದಲೂ ಸದನದ ಒಳಗೆ ಹಾಗೂ ಹೊರಗೆ ಶಿಕ್ಷಕರುಗಳ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ನಾಲ್ಕನೆ ಬಾರಿಗೆ ಸ್ಪರ್ಧಿಸಿರುವ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ವಿಧಾನಪರಿಷತ್‍ಗೆ ಕಳಿಸಿಕೊಡಿ ಎಂದು ತಿಳಿಸಿದರು.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭ
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ನಗರ ಮಹಿಳಾ ಘಟಕದ ಅಧ್ಯಕ್ಷೆ ಶೀಲ ಶ್ರೀನಿವಾಸ್, ಬಸಮ್ಮ, ಶಾಂತಮ್ಮ, ಅರುಣ, ನಗರಸಭೆ ಸದಸ್ಯ ಹರೀಶ್ ಇನ್ನು ಅನೇಕರು ಮತ ಯಾಚನೆಯಲ್ಲಿ ಭಾಗವಹಿಸಿದ್ದರು.
