CHITRADURGA NEWS | 18 APRIL 2026
ಚಿತ್ರದುರ್ಗ: ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಸೀಬಾರ-ಗುತ್ತಿನಾಡು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಮತ್ತು ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ
ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಯ ರೂವಾರಿಗಳಾದ ಹೆಚ್.ಜಲೀಲ್ ಸಾಬ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ರೂಪಿಸಿಕೊಳ್ಳುವಲ್ಲಿ ಮತ್ತು ಉತ್ತಮ ಚರಿತ್ರೆ, ಸಂಸ್ಕೃತಿ ಹಾಗೂ ಆದರ್ಶ ತತ್ವಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಲು ಶಾಲಾ-ಕಾಲೇಜುಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ.
ಕೇವಲ ಅಂಕಗಳಿಗೆ ಮಾತ್ರ ವಿದ್ಯೆಯನ್ನು ಪಡೆಯುವುದು ಮುಖ್ಯವಲ್ಲ, ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಆಗುವ ರೀತಿಯ ವಿದ್ಯಾಭ್ಯಾಸ ಪ್ರಸ್ತುತ ದಿನಮಾನಗಳಲ್ಲಿ ಅವಶ್ಯಕ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಆರ್.ಸುಧಾ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿಯೇ ಪ್ರತಿಷ್ಠಿತ ಕಾಲೇಜು ಆಗಿ ಹೊರಹೊಮ್ಮಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಹಾಗೂ ನಮ್ಮ ಈ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಗಳಿಸಿದ ಅಂಕಗಳಿಗಿಂತ ಹೆಚ್ಚು ಅಂಕಗಳನ್ನು ದ್ವಿತೀಯ ಪಿ.ಯು.ಸಿ ಯಲ್ಲಿ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಹೆಚ್.ಬುಡೆನ್ ಸಾಬ್ ವಹಿಸಿದ್ದರು. ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ವಿಷಯಗಳಲ್ಲಿ 100ಕ್ಕೆ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯವರು ಸನ್ಮಾನಿಸಿದರು.
ಇದನ್ನೂ ಓದಿ: ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
ಸಂಸ್ಥೆಯ ಕಾರ್ಯದರ್ಶಿಗಳಾದ ಎಂ.ನೀಲಕಂಠದೇವರು, ಸದಸ್ಯರಾದ ಮಿರ್ಜಾಸಾಬ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಿ.ಆರ್.ಚನ್ನಬಸಪ್ಪ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಜಿ ಶಿವರುದ್ರಯ್ಯ, ಹಿರಿಯ ಉಪನ್ಯಾಸಕರಾದ ಅಶೋಕ್‌ಕುಮಾರ್ ಜಿ.ಎಲ್., ಆಂಗ್ಲ ಭಾಷಾ ಉಪನ್ಯಾಸಕಿಯರಾದ ಎಂ.ಎನ್ ಶಿಲ್ಪ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
