Connect with us

    Sirigere; ಸೆ.20 ರಿಂದ 24 ರವರೆಗೆ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಶ್ರದ್ದಾಂಜಲಿ ಸಮಾರಂಭ 

    ಸಿರಿಗೆರೆ

    ಮುಖ್ಯ ಸುದ್ದಿ

    Sirigere; ಸೆ.20 ರಿಂದ 24 ರವರೆಗೆ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಶ್ರದ್ದಾಂಜಲಿ ಸಮಾರಂಭ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 SEPTEMBER 2024

    ಚಿತ್ರದುರ್ಗ: ತರಳಬಾಳು ಜಗದ್ಗುರು ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ದಾಂಜಲಿ ಸಮಾರಂಭ ಸೆ.20 ರಿಂದ 24 ರವರೆಗೆ ಸಿರಿಗೆರೆ(Sirigere)ಯಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಸಿರಿಗೆರೆ ಮಠದ ಕಾರ್ಯದರ್ಶಿ ಓಂಕಾರಪ್ಪ ತಿಳಿಸಿದರು.

    ಕ್ಲಿಕ್ ಮಾಡಿ ಓದಿ: Power cut: ಜಿಲ್ಲೆಯಲ್ಲಿ ಸೆ.19ರಂದು ವಿದ್ಯುತ್ ವ್ಯತ್ಯಯ

    ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.20 ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಧಾನಪರಿಷತ್ ಶಾಸಕ ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ್, ಹಾಸ್ಯ ಸಾಹಿತಿ ಎಂ.ಎಸ್.ನರಸಿಂಹಮೂರ್ತಿ ಭಾಗವಹಿಸುವವರು.

    ಸುದ್ದಿಗೋಷ್ಠಿಯಲ್ಲಿ ಸಿರಿಗೆರೆ ಮಠದ ಕಾರ್ಯದರ್ಶಿ ಓಂಕಾರಪ್ಪ

    ಸುದ್ದಿಗೋಷ್ಠಿಯಲ್ಲಿ ಸಿರಿಗೆರೆ ಮಠದ ಕಾರ್ಯದರ್ಶಿ ಓಂಕಾರಪ್ಪ

    ನಿವೃತ್ತ ಮುಖ್ಯೋಪಾಧ್ಯಾಯ ಬಸವರಾಜ ಗಿರಿಯಾಪುರ ಉಪನ್ಯಾಸ ನೀಡಲಿದ್ದಾರೆ. ನಂತರ ಸಾಂಸ್ಕøತಿಕ ಕಾರ್ಯಕ್ರಮ ನೃತ್ಯ ಹಾಗೂ ಭರತನಾಟ್ಯ ಪ್ರದರ್ಶನವಿರುತ್ತದೆ ಎಂದು ಹೇಳಿದರು.

    ಸೆ.21 ರ ಸಂಜೆ 6 ಗಂಟೆಯ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ, ಮಾಜಿ ಸಚಿವ ಹೆಚ್.ಆಂಜನೇಯ, ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಂ.ಗಂಗಾಧರಸ್ವಾಮಿ, ಚಿತ್ರದುರ್ಗ ರಕ್ಷಣಾಧಿಕಾರಿ ರಂಜಿತ್‍ಕುಮಾರ್, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಇವರುಗಳು ಭಾಗವಹಿಸಲಿದ್ದಾರೆ.

    ಕ್ಲಿಕ್ ಮಾಡಿ ಓದಿ: Advertisement; ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ | ಜಾಹೀರಾತು ಅಳವಡಿಕೆಗೆ ಅನುಮತಿ

    ಸೆ.22 ರಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಶುಭ ಧನಂಜಯ್ ಇವರುಗಳು ಆಗಮಿಸುವರು.

    ಸೆ.23 ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ, ಹೊನ್ನಾಳಿ ಶಾಸಕ ಶಾಂತನಗೌಡ ಇವರುಗಳು ಪಾಲ್ಗೊಳ್ಳುವರು.

    ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅಧ್ಯಕ್ಷತೆ ವಹಿಸುವರು.

    ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ, ಶಂಕರ ಎಂ.ಬಿದರಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಕರ್ನಾಟಕ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಬಾವಿ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಇವರುಗಳು ಆಗಮಿಸಲಿದ್ದಾರೆ ಎಂದು ಹೇಳಿದರು.

    ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ

    ಪತ್ರಿಕಾಗೋಷ್ಟಿಯಲ್ಲಿ ಬೃಹನ್ಮಠ ಸಿರಿಗೆರೆಯ ಕಾನೂನು ಸಲಹೆಗಾರ ಸೋಮಶೇಖರಪ್ಪ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top