ಚಿತ್ರದುರ್ಗನ್ಯೂಸ್.ಕಾಂ
ಹೊಸದುರ್ಗ ಸಮೀಪದ ಕಾರೇಹಳ್ಳಿಯಲ್ಲಿನ ಇತಿಹಾಸ ಪ್ರಸಿದ್ಧ ಹೊಯ್ಸಳರ ಕಾಲದ ಹರಿಹರೇಶ್ವರ ದೇವಾಲಯದ ಬಾಗಿಲಿಗೆ ಕಳ್ಳರು ಬೆಂಕಿ ಹಚ್ಚಿದ್ದಾರೆ ದುಷ್ಕೃತ್ಯ ಮೆರೆದಿದ್ದ ಘಟನೆ ಮಾಸುವ ಮುನ್ನವೇ ಚಿಕ್ಕಜಾಜೂರಿನಲ್ಲಿ ದುಷ್ಕರ್ಮಿಗಳು ದೇವಸ್ಥಾನದ ಹುಂಡಿ ಒಡೆದು, ಹಣ ದೋಚಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಐದು ಮೃತದೇಹಗಳಿರುವ ಮನೆಯ ಒಳಗಿನ ಚಿತ್ರಣ ಹೇಗಿದೆ ಗೊತ್ತಾ
ಚಿಕ್ಕಜಾಜೂರು ಸಮೀಪದ ಸಾಸಲು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ದಲ್ಲಿ ಇಡಲಾಗಿದ್ದ ಹುಂಡಿಯಲ್ಲಿ ಸುಮಾರು 10 ತಿಂಗಳ ಕಾಲ ಸಂಗ್ರಹವಾಗಿದ್ದ ಹಣವನ್ನು ಮಂಗಳವಾರ ರಾತ್ರಿ ಕಳ್ಳತನ ಮಾಡಲಾಗಿದೆ. ದೇವಸ್ಥಾನದ ಗೇಟ್‌ಗೆ ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು, ಹುಂಡಿಯನ್ನು ಒಡೆದು ಸ್ವಲ್ಪ ಚಿಲ್ಲರೆ ಹಣವನ್ನು ಬಿಟ್ಟು ಉಳಿದೆಲ್ಲವನ್ನೂ ದೋಚಿದ್ದಾರೆ.
ಇದನ್ನೂ ಓದಿ: ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಸರಳ ಆಚರಣೆ; ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
2023ರ ಫೆಬ್ರುವರಿಯಲ್ಲಿ ಹುಂಡಿ ತೆರೆದಾಗ, ₹1 ಲಕ್ಷ ಹಣ ಸಂಗ್ರಹವಿತ್ತು. ಅಲ್ಲಿಂದ ಈವರೆಗೆ ಅಂದಾಜು ₹80,000 ಹಣ ಸಂಗ್ರಹ ಆಗಿರಬಹುದು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ. ಚಿಕ್ಕಜಾಜೂರು ಪಿಎಸ್ಐ ಎಂ.ಟಿ. ದೀಪು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ದೇವಸ್ಥಾನಗಳ ಹುಂಡಿ ಕಳುವಿನ ಬಗ್ಗೆ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

