CHITRADURGA NEWS | 12 OCTOBER 2026
ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ದೇವಿಗೆ ಅರಿಶಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು..
ಇದನ್ನೂ ಓದಿ:
ಅಂಬಾ ಭವಾನಿ ದೇವಿಗೆ ಅರಿಶಿನ ಅಲಂಕಾರದ ಜೊತೆಗೆ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿ, ಶ್ರದ್ಧಾಭಕ್ತಿಯಿಂದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಈ ಸಂದರ್ಭದಲ್ಲಿ ಮರಾಠ ವಿದ್ಯಾವರ್ಧಕ ಸಂಘದ ಅಂಬಾ ಭವಾನಿ ದೇವಸ್ಥಾನದ ಕಾರ್ಯದರ್ಶಿ ಗೋಪಾಲ್‌ರಾವ್ ಜಾದವ್, ಜೀಜಾ ಮಾತಾ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾಬಾಯಿ ಮಂಜುನಾಥ ಗಾಯಕ್ವಾಡ್, ಕೃಷ್ಣಾಜಿರಾವ್ ಮೋರೆ, ರೋಹಿತ್ ಗಾಯಕ್ವಾಡ್, ವಿನಯ್ ಜಾದವ್, ಕಲಾಬಾಯಿ, ಚಂದ್ರಪ್ಪ ಹಾಗೂ ಶಾರದಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

