
CHITRADURGA NEWS | 10 FEBRUARY 2026
ಚಿತ್ರದುರ್ಗ: ಮೊಬೈಲ್ ಹಾಗೂ ಟಿವಿ ಇಂದಿನ ಪೀಳಿಗೆಯನ್ನೂ ಹಳ್ಳ ಹಿಡಿಸುವಲ್ಲಿ ಯಶಸ್ವಿಯಾಗಿವೆ. ಅದರಲ್ಲೂ ವಿದ್ಯಾರ್ಥಿಗಳ ಸ್ಥಿತಿಯಂತೂ ದೇವರಿಗೆ ಪ್ರೀತಿ ಎನ್ನುವಂತಾಗಿದೆ.
ಹೌದು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ತಾಲೂಕು ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದು, ಮಕ್ಕಳನ್ನು ಮೊಬೈಲ್‌ನಿಂದ ದೂರ ತಂದು, ಪುಸ್ತಕ ಹಿಡಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಸಂಘದಿಂದ ನಾಳೆ ನಾಲ್ಕು ತಾಲೂಕು ಬಂದ್ ಕರೆ | ಭದ್ರಾ ಮೇಲ್ದಂಡೆ ಯೋಜನೆ ತ್ವರಿತಕ್ಕೆ ಆಗ್ರಹ
ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಪ್ರತಿದಿನ ಸಂಜೆ ಎರಡು ಗಂಟೆಗಳ ಕಾಲ ಟಿವಿ ಮತ್ತು ಮೊಬೈಲ್ ಬಳಕೆಯನ್ನು ಸ್ಥಗಿತಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಕಳೆದ ಎರಡು ವರ್ಷಗಳಿಂದ ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, 2025-26ನೇ ಸಾಲಿನ ಫಲಿತಾಂಶವನ್ನು ಉತ್ತಮಪಡಿಸಲು ಈ ವಿಶಿಷ್ಟ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಪರೀಕ್ಷೆಗಳು ಮುಗಿಯುವವರೆಗೂ ಪ್ರತಿದಿನ ಸಂಜೆ 7:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಗ್ರಾಮೀಣ ಭಾಗದ ಪ್ರತಿ ಮನೆಯಲ್ಲೂ ಮೊಬೈಲ್ ಹಾಗೂ ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 09 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ವಿದ್ಯಾರ್ಥಿಗಳ ಓದಿಗೆ ಆದ್ಯತೆ:
ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದ ವಿದ್ಯಾರ್ಥಿಗಳು ದಾರಿ ತಪ್ಪಬಾರದು ಎಂಬ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದ್ದು, ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆಈ ಬಗ್ಗೆ ಕಟ್ಟುನಿಟ್ಟಿನ ಪ್ರಚಾರ ನೀಡಲು ಸೂಚನೆ ನೀಡಲಾಗಿದೆ. ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಹಾಗೂ ಸ್ವಚ್ಛ ವಾಹಿನಿಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
