
CHITRADURGA NEWS | 01 FEBRUARY 2024
ಚಿತ್ರದುರ್ಗ: ವಿಜಯನಗರ ಜಿಲ್ಲೆಯಲ್ಲಿ ಗಾಂಜಾ ಮಾರುತ್ತಿದ್ದ ಚಿತ್ರದುರ್ಗ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ | ಹಿಂಬದಿ ಸವಾರ ಸಾವು
ಚಿತ್ರದುರ್ಗದ ಅಬ್ದುಲ್ ರೆಹಮಾನ್ ಮತ್ತು ಹರಪನಹಳ್ಳಿ ಎನ್.ಮೊಹಮ್ಮದ್ ಯಾಸೀರ್ ಅರಾಫತ್ ಬಂಧಿತರು. ಹರಪನಹಳ್ಳಿ ಪಟ್ಟಣದ ಶಿಕ್ಷಕರ ಬಡಾವಣೆಯ ರಸ್ತೆಯಲ್ಲಿ ಅಬ್ದುಲ್ ರೆಹಮಾನ್, ಎನ್.ಮೊಹಮ್ಮದ್ ಯಾಸೀರ್ ಅರಾಫತ್ ಗಾಂಜಾ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ: ಸಾಣೇಹಳ್ಳಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಒಡಿ ಸೌಲಭ್ಯ
ಈ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಳಿಯಿದ್ದ ಒಟ್ಟು ₹9000 ಮೌಲ್ಯದ 270 ಗ್ರಾಂ ಗಾಂಜಾ ಮತ್ತು ₹3800 ನಗದು ಹಣ ಜಪ್ತಿ ಮಾಡಿದ್ದಾರೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
