
CHITRADURGA NEWS | 04 OCTOBER 2024
ಹಿರಿಯೂರು: ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ (KEB) ತುಳಿದು ಎರಡು ಎಮ್ಮೆಗಳು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕು ಆದಿವಾಲ ಬಳಿಯ ಗೊಲ್ಲರಹಟ್ಟಿಯ ಜಮೀನೊಂದರಲ್ಲಿ ನಡೆದಿದೆ.

ಗ್ರಾಮದ ತಿಮ್ಮಣ್ಣ ಎಂಬುವವರಿಗೆ ಸೇರಿದ ಎಮ್ಮೆಗಳು ಮೇಯಲು ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ಕೊಳವೆಬಾವಿಗೆ ಎಳೆದಿದ್ದ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದ್ದು, ತುಳಿದು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಶೇಂಗಾ, ಮೆಕ್ಕೆಜೋಳದ ಧಾರಣೆ ಎಷ್ಟಿದೆ ?
ಇದೇ ಗ್ರಾಮದ ಲಕ್ಷ್ಮೀದೇವಿ ಎಂಬ ಮಹಿಳೆ ಕೂಡಾ ವಿದ್ಯುತ್ ಶಾಕ್‍ಗೆ ಒಳಗಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
