
CHITRADURGA NEWS | 03 SEPTEMBER 2026
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಧನಸಹಾಯದಡಿಯಲ್ಲಿ ಶ್ರೀಮತಿ ಶೃತಿ ಎಸ್. ಹೆಗಡೆ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ‘ಚಿತ್ರ ಕಲರವ’ ಸೆ. 5 ಮತ್ತು 6ರಂದು ನಗರದ ಪತ್ರಿಕಾ ಭವನದ ಬಿ.ವಿ. ವೈಕುಂಠರಾಜು ಸಭಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಸೆ. 5ರಂದು ಶನಿವಾರ ಸಂಜೆ 5 ಗಂಟೆಗೆ ‘ಚಿತ್ರ ಕಲರವ’ವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್ ಉದ್ಘಾಟಿಸಲಿದ್ದಾರೆ. ಲಲಿತಕಲಾ ಅಕಾಡೆಮಿ ಸದಸ್ಯ ಸಿ. ಕಣ್ಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾ ಪುತ್ತೂರ್ಕರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ, ಚಿತ್ರಕಲಾವಿದರಾದ ನಾಗರಾಜ್ ಬೇದ್ರೆ ಹಾಗೂ ನವೀನ್ ಬೇದ್ರೆ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 23 ಕೋಟಿ ರೂ. ಅನುದಾನ | ಯಾವ ರಸ್ತೆ ಇಲ್ಲಿದೆ ಡೀಟೇಲ್ಸ್
ಎರಡು ದಿನಗಳ ಕಾಲ ನಡೆಯಲಿರುವ ಚಿತ್ರಕಲಾ ಪ್ರದರ್ಶನದಲ್ಲಿ ಶೃತಿ ಎಸ್. ಹೆಗಡೆ ಅವರು ರಚಿಸಿರುವ ಯಕ್ಷಗಾನ, ಸಂಸ್ಕೃತಿ, ಪರಂಪರೆ ಹಾಗೂ ಪ್ರಕೃತಿ ಕುರಿತ ವಿವಿಧ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಚಿತ್ರಕಲಾ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರದರ್ಶನವನ್ನು ವೀಕ್ಷಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

