CHITRADURGA NEWS | 10 APRIL 2025
ಚಿತ್ರದುರ್ಗ: ಪ್ರತಿ ವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಏಪ್ರಿಲ್ 15 ಮತ್ತು 16ರಂದು ನಡೆಯುವ ಚಿತ್ರದುರ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಆಯಾ ಇಲಾಖಾ ಮುಖ್ಯಸ್ಥರು ಶೇ.50ರಷ್ಟು ಸಿಬ್ಬಂದಿಗಳಿಗೆ ಮೀರದಂತೆ ಭಾಗವಹಿಸು ಅನುಮತಿ ನೀಡತಕ್ಕದ್ದು.

ಇದನ್ನೂ ಓದಿ: ದ್ವಿತೀಯ ಪಿಯುಸಿ ರಿಸಲ್ಟ್ | ಇವರೇ ನೋಡಿ ಜಿಲ್ಲೆಯ ಟಾಪರ್ಸ್ | ಜಿಲ್ಲೆಗೆ ಶೇ.59.87 ಫಲಿತಾಂಶ
ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಧಿಕಾರಿ, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರ ಹಾಜರು ಪಡಿಸುವ ಷರತ್ತಿಗೊಳಪಡಿಸಿ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವುದು.
ಕ್ರೀಡಾಕೂಟ ನಡೆಯುವ ದಿನಗಳ ಪ್ರಯಾಣಭತ್ಯೆಯನ್ನು ಮಾತೃ ಇಲಾಖೆಯಿಂದಲೇ ಭರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
