CHITRAUDRGA NEWS | 19 APRIL 2026
ಚಿತ್ರದುರ್ಗ: ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು
ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.
ರಾಜ್ಯ ಕೃಷಿ ಆಧಾರಿತ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರಾಯೋಗಿಕ ಪರೀಕ್ಷೆಗೆ ಈ ತರಬೇತಿಯಿಂದ ಪ್ರಯೋಜನವಾಗಲಿದೆ.
ತರಬೇತಿ ಪಡೆಯಲು ಆಸಕ್ತಿಯುಳ್ಳವರು ಏಪ್ರಿಲ್ 24ರೊಳಗಾಗಿ ಎಪಿಎಂಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಐಎಟಿ ಅಧ್ಯಕ್ಷ ಬಿ.ಮಂಜುನಾಥ್ ಕೋರಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ
ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ದೂರವಾಣಿ ಸಂಖ್ಯೆ 9742455666, ಖಜಾಂಚಿ ದೂರವಾಣಿ ಸಂಖ್ಯೆ 8217403715 ಗೆ ಸಂಪರ್ಕಿಸಬಹುದು ಎಂದು ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
