
CHITRADURGA NEWS | 11 January 2026
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮತ್ತೆ ಇನ್ನೊಂದು ಕಾರು ಅಪಘಾತ ಚಿತ್ರದುರ್ಗ ನಗರದ ಹೊರವಲಯದ ಸಂಭವಿಸಿದೆ.
ಇದನ್ನೂ ಓದಿ: ಹಿರಿಯೂರು ಬಳಿ ಭೀಕರ ಅಪಘಾತ | ನಾಲ್ವರು ಯುವಕರು ಮೃತ | ಕಾರು – ಲಾರಿ ನಡುವೆ ಡಿಕ್ಕಿ

ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ DYSP ವೈಷ್ಣವಿ ಅವರ ಕಾರು ಅಪಘಾತವಾಗಿದ್ದು, ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಅಪಘಾತದಲ್ಲಿ Dysp ವೈಷ್ಣವಿ ತಾಯಿ ಕಮಲ ಹರಿಬಾಬು(69) ಹಾಗೂ ಕಾರುಚಾಲಕ ರಾಕೇಶ್(40) ಸಾವನ್ನಪ್ಪಿದ್ದಾರೆ.
Dysp ವೈಷ್ಣವಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಸ್ ಬೆಂಕಿ ದುರಂತ | 9 ಮಂದಿ ಸಜೀವ ದಹನ ? | ಶಾಲಾ ಮಕ್ಕಳು ಪಾರು
ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
