
CHITRADURGA NEWS | 06 MARCH 2025
ಹೊಳಲ್ಕೆರೆ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ರೈತರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಲ್ಲಿಕಟ್ಟೆ ಗ್ರಾಮದ ನಾಗರಾಜ(35) ಹಾಗೂ ಶ್ರೀನಿವಾಸ(48) ಮೃತ ರೈತರಾಗಿದ್ದಾರೆ.
ಹೊಳಲ್ಕೆರೆ ತಾಲೂಕು ನಲ್ಲಿಕಟ್ಟೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋಗಿದ್ದಾಗ ಈಜಲು ಹೋಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
12 ಅಡಿ ಆಳದ ಕೃಷಿ ಹೊಂಡವಿದ್ದು, ನೀರಿನಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರು ಯುವ ರೈತರ ಸಾವಿನ ದುಃಖ ಇಡೀ ಗ್ರಾಮವನ್ನು ಆವರಿಸಿದ್ದು, ಆಕ್ರಂಧನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್‍ಐ ಕಾಂತರಾಜ್ ಹಾಗೂ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
