
ಚಿತ್ರದುರ್ಗ ನ್ಯೂಸ್.ಕಾಂ
ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿಯನ್ನು ಬೆಂಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದ ರೈತ ಅಪಘಾತದಲ್ಲಿ ಮೃತಪಟ್ಟ ಘಟನೆ ತುಮಕೂರು ತಾಲ್ಲೂಕಿನ ಊರುಕೆರೆ ಬಳಿ ನಡೆದಿದೆ.
ಇದನ್ನೂ ಓದಿ: ಮದುವೆಗೆ ಹೊರಟಿದ್ದ ಬಸ್ ಪಲ್ಟಿ; ಸ್ಥಳದಲ್ಲೇ ಓರ್ವ ಮೃತ

ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಓಬಣ್ಣನಹಳ್ಳಿ ಗ್ರಾಮದ ಮುನಿಸ್ವಾಮಿ (55), ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ, ಕ್ಯಾಂಟರ್ ಚಾಲಕ ರಾಕೇಶ್ (35) ಮೃತಪಟ್ಟಿದ್ದಾರೆ.
ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿಯನ್ನು ಮುನಿಸ್ವಾಮಿ ಬೆಂಗಳೂರು ಮಾರುಕಟ್ಟೆ ತೆಗೆದುಕೊಂಡು ಹೋಗುವಾಗ ಘಟನೆ ಸಂಭವಿಸಿದೆ.
ಮಳೆಯ ಕಾರಣಕ್ಕೆ ರಾತ್ರಿ ಕ್ಯಾಂಟರ್‌ಗೆ ಈರುಳ್ಳಿಯನ್ನು ತುಂಬಿ ಚಳ್ಳಕೆರೆಯಿಂದ ಹಿರಿಯೂರು ತಲುಪಿದ್ದಾರೆ. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶಿರಾ ಮಾರ್ಗವಾಗಿ ಬರುತ್ತಿದ್ದಾಗ ಊರುಕೆರೆ ಬಳಿ ಮುಂಜಾನೆ ಲಾರಿಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್‌ನಲ್ಲಿದ್ದ ಮುನಿಸ್ವಾಮಿ, ರಾಕೇಶ್ ಮೃತಪಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
