CHITRADURGA NEWS | 03 MAY 2025
ಚಿತ್ರದುರ್ಗ: ನಗರದ ದೊಡ್ಡಪೇಟೆಯ ರಾಜ ಉತ್ಸವಾಂಬ ಉಚ್ಚಂಗಿಯಲ್ಲಮ್ಮ ದೇವಿಯವರ ಒಂದು ವಾರ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ದೇವಿಗೆ ಕಂಕಣಧಾರಣೆಯೊ0ದಿಗೆ ಶನಿವಾರ ಚಾಲನೆ ದೊರೆಯಿತು.
Also Read: SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್

ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಗಿನಜಾವ ದೇವಿಯ ಮೂರ್ತಿಗೆ ನಾನಾ ಅಭಿಷೇಕ ನೆರವೇರಿಸಿದ ಬಳಿಕ ಕಂಕಣಧಾರಣೆ, ಮದುವಣಗಿತ್ತಿ ಶಾಸ್ತ್ರ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು.
ಕೋಟೆ ರಸ್ತೆಯ ಅಮ್ಮನವರ ದೇಗುಲದಲ್ಲಿ ಶನಿವಾರ ಮುಂಜಾನೆಯಿ0ದ ಶ್ರದ್ಧಾ ಭಕ್ತಿಯಿಂದ ನಾನಾ ಪೂಜಾ ಕೈಂಕರ್ಯಗಳು ಜರುಗಿದವು. ಈ ವೇಳೆ ನೆರೆದಿದ್ದ ಭಕ್ತರು ಉದೋ ಉದೋ ಎಂಬ ಉದ್ಘಾರ ಘೋಷಗಳನ್ನು ಮೊಳಗಿಸಿದರು. ಕಂಕಣಧಾರಣೆ, ಮದುವಣಗಿತ್ತಿ ಶಾಸ್ತç ಸೇರಿದಂತೆ ಮತ್ತಿತರ ಪೂಜಾ ವಿದಿವಿಧಾನಗಳನ್ನು ನೆರವೇರಿಸಲಾಯಿತು.
ಕಂಕಣಧಾರಣೆ ಮದುವಣಗಿತ್ತಿ ಶಾಸ್ತ್ರದ ಪ್ರಯುಕ್ತ ಗರ್ಭಗುಡಿ ಹಾಗೂ ಉತ್ಸವ ಮೂರ್ತಿಗಳನ್ನು ಹೊಂಬಾಳೆ, ಗುಲಾಬಿ, ಸಂಪಿಗೆ, ಮಲ್ಲಿಗೆ, ಕನಕಾಂಬರ, ಚೆಂಡು, ಪತ್ರೆ ಸೇರಿದಂತೆ ಬಗೆ ಬಗೆಯ ಪುಷ್ಪಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.
Also Read: ಬೇಸಿಗೆಯಲ್ಲಿ ಯೋಗ ಮಾಡಿದ ನಂತರ ಈ ಪಾನೀಯಗಳನ್ನು ಕುಡಿಯಿರಿ
ನಿಂಬೆಹಣ್ಣಿನ ಹಾರ, ದ್ರಾಕ್ಷಿ ಸೇರಿದಂತೆ ಮತ್ತಿತರ ಹಣ್ಣುಗಳಿಂದ ಸಿಂಗಾರ ಮಾಡಲಾಗಿತ್ತು. ಮಹಾಮಂಗಳಾರತಿ ನೆರವೇರಿಸಿದ ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು. ಆನಂತರ ನಡೆದ ಅನ್ನಸಂತರ್ಪಣೆಯಲ್ಲಿ ಭಕ್ತರು ಪಾಯಸ, ಪಲ್ಯ, ಅನ್ನ ಸಾಂಬಾರು ಸವಿದರು.
ರಾತ್ರಿ ಸುಮಾರು 8 ಗಂಟೆಗೆ ದೇವಿಯ ಉತ್ಸವ ಮೂರ್ತಿಯನ್ನು ಬುರುಜನಹಟ್ಟಿ ಭಕ್ತರು ವಿಶೇಷ ಪುಷ್ಪಾಲಂಕಾರದೊ0ದಿಗೆ ಸಿಂಹವಾಹಿನಿ ಮೂಲಕ ಸುಸಜ್ಜಿತ ಉಚ್ಛಾಯದಲ್ಲಿ ಪ್ರತಿಷ್ಠಾಪಿಸಿ, ನಗರದ ಬುರುಜನಹಟ್ಟಿ ಸೇರಿದಂತೆ ಮತ್ತಿತರ ಬಡಾವಣೆಗಳ ಕೆಲ ಭಕ್ತರ ಮನೆಗಳಲ್ಲಿ ದೇವಿಗೆ ಪೂಜೆ ಸಲ್ಲಿಸಲಾಯಿತು. ನೆರೆದಿದ್ದವರಿಗೆ ಕೋಸಂಬರಿ, ಪಾನಕ ವಿತರಿಸಲಾಯಿತು. ದೇವಿಯನ್ನು ಪುನಃ ದೇಗುಲಕ್ಕೆ ಕರೆದೊಯ್ಯಲಾಯಿತು.
ಮೇ.4ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಮಹಾಮಂಗಳಾರತಿ ನೆರವೇರಲಿದೆ. ಉಗ್ರಾಣದ ವಂಶಸ್ಥರಿ0ದ ದೇವಿಗೆ ಹೂವಿನ ವಿಶೇಷ ಅಲಂಕಾರ ಹಾಗೂ ರಾತ್ರಿ 8.30ಕ್ಕೆ ಸರ್ಪೋತ್ಸವ ಜರುಗಲಿದೆ. ಮೇ.5ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಮಹಾಮಂಗಳಾರತಿ, ರಾತ್ರಿ 8.30ಕ್ಕೆ ನವಿಲು ಉತ್ಸವ ನೆರವೇರಲಿದೆ.
Also Read: ಗರ್ಭಿಣಿಯರು ಜೋರಾಗಿ ಸೀನಿದರೆ ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ?
ಮೇ.7ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಮಹಾಮಂಗಳಾರತಿ ಹಾಗೂ ಬೆಳಗ್ಗೆ 9ಕ್ಕೆ ದೇವಿಯು ಕೆಳಗಿಳಿದು ರಾಜ ಬೀದಿಗಳಲ್ಲಿ ಕುದುರೆ ಉತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮೇ.8ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಮಹಾಮಂಗಳಾರತಿ ಜರುಗಲಿವೆ.
ಮೇ.9ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಮಹಾಮಂಗಳಾರತಿ, ಬಳಿಕ ನಗರದ ರಾಜ ಬೀದಿಗಳಲ್ಲಿ ನಾನಾ ಜಾನಪದ ಕಲಾ ಮೇಳಗಳೊಂದಿಗೆ ಹೂವಿನ ಉಚ್ಚಾಯ ರಥೋತ್ಸವ ನೆರವೇರಲಿದೆ.
ಮೇ.10ರ ಮಧ್ಯಾಹ್ನ 12ಕ್ಕೆ ದೇವಿಗೆ ವಿಶೇಷ ಭಂಡಾರದ ಪೂಜೆ ನಂತರ ಪ್ರಸಾದ ವಿನಿಯೋಗ, ಸಂಜೆ 6ಕ್ಕೆ ದೇವಸ್ಥಾನದ ಮುಂಭಾಗ ಸಿಡಿ ಉತ್ಸವ ಜರುಗಲಿದ್ದು, ಹರಕೆ ಹೊತ್ತ ಮಹಾ ಭಕ್ತರಿಂದ ಸಿಡಿ ಸೇವೆ ನಡೆಯಲಿದೆ.
Also Read: ಮಕ್ಕಳ ದೇಹದಿಂದ ಬರುವ ಕೆಟ್ಟ ಬೆವರಿನ ವಾಸನೆಯನ್ನು ನಿವಾರಿಸಲು ಈ ಸಲಹೆ ಪಾಲಿಸಿರಿ
ಮೇ.11ರ ಬೆಳಗ್ಗೆ 8ಕ್ಕೆ ಅಭಿಷೇಕ, ಮಹಾಮಂಗಳಾರತಿ, ರಾತ್ರಿ 9ಕ್ಕೆ ದೇವಿಯ ಮಹಾ ಭಕ್ತರಾದ ಜೋಗಪ್ಪ ಮತ್ತು ಜೋಗಮ್ಮನವರಿಂದ ಓಕುಳಿ ಸೇವೆ ಜರುಗಲಿದೆ. ಮೇ.13ರ ಬೆಳಗ್ಗೆ 8ಕ್ಕೆ ದೇವಿಗೆ ಅಭಿಷೇಕ, ಕಂಕಣ ವಿಸರ್ಜನೆಯೊಂದಿಗೆ ಜಾತ್ರೆ ಮುಕ್ತಾಯವಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
