
CHITRADURGA NEWS | 15 JULY 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ವಿದ್ಯಾಲಯದಲ್ಲಿ ಉಚಿತ ವಸತಿಯುತ ಶಿಕ್ಷಣ, ಸ್ಮಾರ್ಟ್ ಕ್ಲಾಸ್, ಅತ್ಯಾಧುನಿಕ ಪ್ರಯೋಗಾಲಯ, ಕ್ರೀಡಾಂಗಣ ಹಾಗೂ ಅನುಭವಿ ಶಿಕ್ಷಕರ ಮಾರ್ಗದರ್ಶನದ ಸೌಲಭ್ಯಗಳಿದ್ದು, ಪ್ರವೇಶ ಬಯಸುವ ಅಭ್ಯರ್ಥಿಗಳ ಜನ್ಮ ದಿನಾಂಕವು 01.06.2009 ರಿಂದ 31.07.2011 ರ ನಡುವೆ ಇರಬೇಕು.
ಅಭ್ಯರ್ಥಿಯು 2025-26ರ ಶೈಕ್ಷಣಿಕ ಅವಧಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, 10ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಯು 10ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕನಿಷ್ಠ ತಲಾ ಶೇ.60 ಅಂಕಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್ | ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ | ಫಲಾನುಭವಿಗಳ ಖಾತೆಗೆ ಹಣ ಜಮೆ
ಪ್ರವೇಶಾತಿ ಹಾಗೂ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 9945699049, 8453091534, 9740133395, 9739116412 ಗೆ ಸಂಪರ್ಕಿಸಬಹುದಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

