CHITRADURGA NEWS | 21 MARCH 2026
ಚಿತ್ರದುರ್ಗ: ಯುಗಾದಿ ಅಂದಮೇಲೆ ಜೂಜು ಮಾಮೂಲು ಎನ್ನುವ ಮಾತು ಕೇಳಿದ್ದೇವೆ. ಆದರೆ, ಪೊಲೀಸರು ಮಾತ್ರ ಜೂಜಾಟ ಆಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ. ಕಣ್ತಪ್ಪಿಸಿ ಆಡುವವರ ಮೇಲೆ ದಾಳಿ ನಡೆಸಿದ್ದಾರೆ.
ಯುಗಾದಿ ಹಬ್ಬದ ಸಂದರ್ಭ ಅಂದರೆ ಮಾರ್ಚ್ 17 ರಿಂದ 21 ರವರೆಗೆ ಜಿಲ್ಲೆಯಾದ್ಯಂತ ನಡೆದ ಇಸ್ಪೀಟ್ ಜೂಜಾಟ ಪ್ರಕರಣಗಳ ಮೇಲೆ ಪೊಲೀಸರು ದಾಳಿ ಮಾಡಿಸಿ ಭಾರೀ ಮೊತ್ತದ ನಗದು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು
ಹಬ್ಬದ ವೇಳೆ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಬರೋಬ್ಬರಿ 1189 ಜನರ ಮೇಲೆ ಕ್ರಮ ಜರುಗಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಠಾಣೆಗಳಲ್ಲಿ 230 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದು, ಆರೋಪಿಗಳಿಂದ 15,48,925 ರೂ.ಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಳಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
