
CHITRADURGA NEWS | 24 FEBRUARY 2026
ಚಿತ್ರದುರ್ಗ: ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಇದೇ ಫೆ.26ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ದಾವಣಗೆರೆ ಜಿಲ್ಲೆಯಿಂದ ಆಗಮಿಸುವ ಅವರು ದಾವಣಗೆರೆ-ತುಮಕೂರು ನಡುವಿನ ನೂತನ ನೇರ ರೈಲ್ವೇ ಕಾಮಗಾರಿಗಳ ಪ್ರಗತಿ ವೀಕ್ಷಣೆ ನಡೆಸುವರು.
ಇದನ್ನೂ ಓದಿ: ಅಡಿಕೆ ಧಾರಣೆ | 23 ಏಪ್ರಿಲ್ | ಯಾವ ಅಡಿಕೆಗೆ ಎಷ್ಟು ರೇಟಾಯ್ತು..?
ಸಚಿವರು ಅಂದು ಬೆಳಿಗ್ಗೆ 9.55 ರಿಂದ ಮಧ್ಯಾಹ್ನ 1.30 ರವರೆಗೆ ತೋಳುಹಣೆಸೆ-ಆನಗೋಡು, ಆನಗೋಡು ರೈಲ್ವೇ ನಿಲ್ದಾಣ, ಆನಗೋಡು-ಹೆಬ್ಬಾಳು, ಹೆಬ್ಬಾಳು-ಭರಮಸಾಗರ, ಭರಮಸಾಗರ-ಚಿತ್ರದುರ್ಗ ನಡುವಿನ ರೈಲ್ವೇ ಹಳಿ ಕಾಮಗಾರಿ ವೀಕ್ಷಿಸುವರು.
ನಂತರ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಸಮಯ ತಂಗುವ ಅವರು ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗದಿಂದ ತುಮಕೂರಿಗೆ ತೆರಳುವರು ಎಂದು ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
