By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    3 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    3 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    3 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    9 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    14 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    15 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಉದ್ಯಾನವನಕ್ಕೆ ಸಾಲುಮರದ ತಿಮ್ಮಕ್ಕ ಹೆಸರಿಡಿ | ಎಚ್.ಆಂಜನೇಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಉದ್ಯಾನವನಕ್ಕೆ ಸಾಲುಮರದ ತಿಮ್ಮಕ್ಕ ಹೆಸರಿಡಿ | ಎಚ್.ಆಂಜನೇಯ

News Desk Chitradurga News
Last updated: 16 November 2025 20:06
News Desk Chitradurga News
7 months ago
Share
ಸಾಲುಮರದ ತಿಮ್ಮಕ್ಕಗೆ ನುಡಿನಮನ ಕಾರ್ಯಕ್ರಮ
SHARE

CHITRADURGA NEWS | 16 NOVEMBER 2025

ಚಿತ್ರದುರ್ಗ: ವಿಶ್ವವಿದ್ಯಾನಿಲಯಕ್ಕೆ ತಿಮ್ಮಕ್ಕ ಹೆಸರನ್ನು ನಾಮಕರಣಗೊಳಿಸಬೇಕು. ಸಾವಿರ ಎಕರೆಗೂ ಹೆಚ್ಚು ಭೂಮಿಯಲ್ಲಿ ಅವರ ಹೆಸರಿನಲ್ಲಿ ರಾಷ್ಟ್ರೀಯ ಉದ್ಯಾನವನ ಸ್ಥಾಪಿಸಬೇಕು. ಅವರ ಪುತ್ರನ ನೇತೃತ್ವದಲ್ಲಿ ಟ್ರಸ್ಟ್ ಸ್ಥಾಪಿಸಲು ಒಂದೇರಡು ಎಕರೆ ಭೂಮಿ ಕೊಟ್ಟು, ಟ್ರಸ್ಟ್ ಮೂಲಕ ಪರಿಸರ ಜಾಗೃತಿ ಮೂಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಇದನ್ನೂ ಓದಿ: ವಿದ್ಯಾನಗರ ಏಳುಕೋಟಿ ಬಡಾವಣೆ ನಿವಾಸಿ ರತ್ನಮ್ಮ ನಿಧನ 

ತಾಲೂಕಿನ ಸೀಬಾರ ಗ್ರಾಮದ ತಮ್ಮ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಮಾದಾರ ಮಹಾಸಭಾ ವತಿಯಿಂದ ಆಯೋಜಿಸಿದ್ದ ಸಾಲುಮರದ ತಿಮ್ಮಕ್ಕ ನುಡಿನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಾಲುಮರದ ತಿಮ್ಮಕ್ಕ ಸೇರಿ ಅನೇಕ ಸಾಮಾನ್ಯ ಮಹಿಳೆಯರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೃಕ್ಷಮಾತೆ ಎಂದೇ ಗುರುತಿಸಿಕೊಂಡಿರುವ ಸಾಲುಮರದ ತಿಮ್ಮಕ್ಕಳ ಹೆಸರನ್ನು ಸ್ಮರಣೀಯಗೊಳಿಸಬೇಕಿದೆ ಎಂದು ಹೇಳಿದರು.

ಸಾಮಾನ್ಯ ಮಹಿಳೆ ತಿಮ್ಮಕ್ಕಳ ಬದ್ಧತೆ, ಪರಿಸರ ಕಾಳಜಿ, ಗಿಡ-ಮರಗಳ ಪ್ರಾಮುಖ್ಯತೆಯ ಅರಿವು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಬುಡಕಟ್ಟು, ಹಳ್ಳಿ ಜನರು ಪ್ರಕೃತಿಯೊಂದಿಗೆ ಬದುಕು ಕಟ್ಟಿಕೊಂಡವರು. ಮರಗಳನ್ನೇ ದೇವರ ಸ್ಥಾನದಲ್ಲಿಟ್ಟು ಪೂಜಿಸಿದವರು. 

ನಮ್ಮ ಪೂರ್ವಿಕರು ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಹ ಮಹನೀಯರು. ಒಂದು ಹೆಜ್ಜೆ ಮುಂದಿಟ್ಟ ತಿಮ್ಮಕ್ಕ ತನಗೆ ಮಕ್ಕಳಿಲ್ಲದ ಕೊರಗು ನೀಗಿಸಿಕೊಳ್ಳಲು ಸಸಿ ನೆಟ್ಟು ಅವುಗಳನ್ನು ಸಲುಹಿದ ರೀತಿಯೇ ಸಮಾಜಕ್ಕೆ ಉತ್ತಮ ಸಂದೇಶ ನೀಡಿದೆ ಎಂದರು.

ಇದನ್ನೂ ಓದಿ: ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ

ತನ್ನ ಪತಿ, ಸಂಬಂಧಿಗಳ ಜೊತೆಗೆ ಸುಃಖದಿಂದ ಇರಬೇಕಾದ ಸಂದರ್ಭದಲ್ಲಿಯೇ ರಸ್ತೆಬದಿ ಸಸಿ ನೆಟ್ಟು ಪೋಷಿಸುವ ಮಹತ್ತರ ಕಾರ್ಯ ಮಾಡಿ ಸಾಲುಮರದ ತಿಮ್ಮಕ್ಕ ಎಂದೇ ಜನಪ್ರಿಯತೆ ಗಳಿಸಿದ ಮೇಲೂ ನಾಡಿನಾದ್ಯಂತ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ನಿಸ್ವಾರ್ಥ ಬದುಕು ನಡೆಸಿದ ತಿಮ್ಮಕ್ಕ ಮಾದರಿ ಆಗಿದ್ದಾರೆ ಎಂದು ತಿಳಿಸಿದರು.

ಪತಿ ಸಾವಿನ ಬಳಿಕ ಸಂಕಷ್ಟಕ್ಕೆ ಸಿಲುಕಿದರೂ ಸಸಿ ನೆಟ್ಟು ಪೋಷಿಸುವ ಕಾರ್ಯ ಕೈಬಿಡದೆ ಮುಂದುವರಿಸಿಕೊ0ಡಿದ್ದು ಸ್ಮರಣೀಯ. ಈ ಕಾರಣಕ್ಕೆ ತಿಮ್ಮಕ್ಕ ಸಾವಿನ ಬಳಿಕವೂ ಮರ-ಗಿಡಗಳಲ್ಲಿ ಸದಾ ಜೀವಂತವಾಗಿರುತ್ತಾರೆ ಎಂದರು.

ಸಸಿಯೊ0ದನ್ನು ನೆಟ್ಟು ಮರವನ್ನಾಗಿಸಿದರೆ ನೆರಳು, ಹಣ್ಣು, ಶುದ್ಧ ಗಾಳಿ ಜೊತೆಗೆ ಮಳೆ ತರಿಸುತ್ತದೆ. ಸಕಲ ಜೀವರಾಶಿಗಳಿಗೆ ಅನುಕೂಲ ಕಲ್ಪಿಸುತ್ತದೆ. ಈ ಸತ್ಯವನ್ನು ಅನಕ್ಷರಸ್ತೆ ತಿಮ್ಮಕ್ಕ ಅರಿತು ವೃಕ್ಷಗಳ ಪಾಲಿಗೆ ತಾಯಿಯಾಗಿ ನಿಂತಿದ್ದು ಅಕ್ಷರವಂತರ ಜ್ಞಾನದೋಯಕ್ಕೆ ಪ್ರಮುಖ ವಸ್ತುವಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಎಸ್‌.ವರಲಕ್ಷ್ಮಿ ಆಯ್ಕೆ

ಈಚೆಗೆ ಅಭಿವೃದ್ಧಿ ಹೆಸರಲ್ಲಿ ಮರ-ಗಿಡಗಳನ್ನು ಕಡಿದರೂ ಇದಕ್ಕೆ ಪ್ರತಿಯಾಗಿ ಸಸಿಗಳನ್ನು ನೆಟ್ಟು ಪೋಷಿಸಬೇಕೆಂಬ ಕಾನೂನು ಸರ್ಕಾರ ಜಾರಿಗೊಳಿಸಿದೆ. ಆದರೆ, ಸಸಿ ನೆಟ್ಟ ಬಳಿಕ ಅವುಗಳ ಪೋಷಣೆ ಮರೆತು ಬಿಡುವ ಗುಣದಿಂದ ಪರಿಸರದಲ್ಲಿ ಏರುಪೇರಾಗುತ್ತಿದೆ. ಪರಿಣಾಮ ಮಳೆ ಕಡಿಮೆಯಾಗಿದೆ. ಶುದ್ಧಗಾಳಿಗಾಗಿ ಹಣ ಕೊಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮರಗಳು ಹೆಚ್ಚಿರುವ ಊರು ತಂಪು ಆಗಿರುತ್ತದೆ. ಮಳೆ ಸುರಿಯುತ್ತದೆ. ಬಿಸಿಲಿನ ಧಗೆಯಿಂದ ರಕ್ಷಣೆ ಪಡೆಯಬಹುದಾಗಿದೆ. ಪಕ್ಷಿಗಳ ಇಂಪಾದ ಚಿಲಿಪಿಲಿ ಕಿವಿ, ಮನಸ್ಸಿಗೆ ತಂಪು ತರಲಿದೆ. ಮಕ್ಕಳು ಸಂಭ್ರಮಿಸಲು, ಆಟವಾಡಲು ಅವಕಾಶ ದೊರೆಯಲಿದೆ. ಆದರೆ, ನಾವು ಸೀಮೆಂಟ್ ನಾಡು ನಿರ್ಮಾಣ ಮಾಡುತ್ತ, ಪರಿಸರ ರಕ್ಷಣೆಯನ್ನೇ ಮರೆಯುತ್ತಿದ್ದೇವೆ ಎಂದು ಬೇಸರಿಸಿದರು.

ಈ ತಪ್ಪು ಹಾದಿಯಿಂದ ಹೊರಬರುವ ಬಹುದೊಡ್ಡ ಸವಾಲು ನಮ್ಮ ಮುಂದಿದೆ. ಅಭಿವೃದ್ಧಿ ಪರಿಭಾಷೆ ಬದಲಾಗಬೇಕಿದೆ. ಪ್ರಾಣಿಪಕ್ಷಿಗಳು, ಗಿಡ-ಮರ, ಪ್ರಕೃತಿ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸಬೇಕಿದೆ. ತಿಮ್ಮಕ್ಕಳನ್ನು ನಾವುಗಳು ಮಾದರಿಯನ್ನಾಗಿಸಿಕೊಂಡರೇ ನೆಮ್ಮದಿ ಬದುಕು ಸಾಧ್ಯವಾಗಲಿದೆ ಎಂದರು.

ಇದನ್ನೂ ಓದಿ: ಪುರುಷರು ಕೇಸರಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?

ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಜೆ.ಆರ್.ರವಿಕುಮಾರ್ ನಾಯಕನಹಟ್ಟಿ, ಮೇಘ ಗಂಗಾಧರ ನಾಯ್ಕ, ವಕೀಲರಾದ ರವೀಂದ್ರ, ಉಮಾಪತಿ, ಪರಿಸರವಾದಿ ಇನಾಯತ್ ಷರೀಫ್ ಮಾತನಾಡಿದರು.   

ಕಾಂಗ್ರೆಸ್ ಎಸ್ಸಿ ವಿಭಾಗದ ತಾಲೂಕು ಅಧ್ಯಕ್ಷ ಅನಿಲ್ ಕೋಟಿ, ಹೊಳಲ್ಕೆರೆ ಕಾಂಗ್ರೆಸ್ ಮಾಧ್ಯಮ ವಿಭಾಗದ ಕಿರಣ್ ಶಿವಪುರ, ಅಜಾದ್ ನಗರ ಗ್ರಾಪಂ ಮಾಜಿ ಸದಸ್ಯ ದಾದಾಪೀರ್, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮುನೀರಾ, ಒಬಿಸಿ ಘಟಕದ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಭೀಮಸಮುದ್ರ, ಚೇತನ್ ಬೋರೇನಹಳ್ಳಿ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsH. Anjaneyasalumarada thimmakkaಎಚ್. ಆಂಜನೇಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಲುಮರದ ತಿಮ್ಮಕ್ಕ
Share This Article
Facebook Email Print
Previous Article ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ
Next Article ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಬಿಸಿಯೂಟ ಯೋಜನೆ ಸ್ವಾಗತರ್ಹ | ಬಿ.ಪಿ.ತಿಪ್ಪೇಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up