CHITRADURGA NEWS | 31 AUGUST 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(open university)ದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಅವೃತ್ತಿ) ಪ್ರಥಮ ವರ್ಷದ B.A./B.Com, B.Sc., B.Lib.I.Sc., B.C.A.,B.B.A., B.S.W., M.A/M.Com, M.A.-M.C.J., M.Lib.I.Sc., M.B.A., M.Sc., M.C.A., M.S.W., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್ ಗಳ ಪ್ರವೇಶಕ್ಕೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪ್ರಕ್ರಿಯೆಯು ಈಗಾಗಲೇ ಜುಲೈ 22 ರಿಂದ ಪ್ರಾರಂಭವಾಗಿದೆ.
ಕ್ಲಿಕ್ ಮಾಡಿ ಓದಿ: Application; ಮೀನುಗಾರಿಕೆ ಇಲಾಖೆ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ/ಕೋರ್ಸ್ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.
ಅಲ್ಲದೇ ಕೋವಿಡ್-19 ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಕ್ಲಿಕ್ ಮಾಡಿ ಓದಿ: Cyber crime: ಫೇಸ್‌ಬುಕ್ ಜಾಹೀರಾತು ಮೇಲೆ ಕ್ಲಿಕ್ | ಲಕ್ಷಾಂತರ ರೂಪಾಯಿ ವಂಚನೆ
ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 8722669855, 7204352581, 9008905457, 8277205613 ಸಂಪರ್ಕಿಸಬಹುದುಉ ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
