CHITRADURGA NEWS | 22 JANUARY 2026
ಹೊಸದುರ್ಗ: ದೊಡ್ಡಕಿಟ್ಟದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಣ್ಣಕಿಟ್ಟದಹಳ್ಳಿಯ ಟಿ.ಈರಪ್ಪ(ಗೌಡಪ್ಪ) ಹಾಗೂ ಉಪಾಧ್ಯಕ್ಷರಾಗಿ ಡಿ.ಕೆ.ಹಳ್ಳಿ ಅಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವೃತ್ತಿ ಆಧಾರಿತ ಕೌಶಲ್ಯ ತರಬೇತಿ | ಅರ್ಜಿ ಅಹ್ವಾನ
ಎಚ್.ರುದ್ರಪ್ಪ ಹಾಗೂ ಸುಮಿತ್ರ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜ.22 ರಂದು ಚುನಾವಣೆ ನಡೆಯಿತು.
ಹೊಸದುರ್ಗ ಸಹಕಾರ ಅಭಿವೃದ್ಧಿ ಅಧಿಕಾರಿ ರಾಮು ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಟಿ.ಈರಪ್ಪ(ಗೌಡಪ್ಪ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಂಜಿನಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ಆಯ್ಕೆಯನ್ನು ಅವಿರೋಧ ಎಂದು ಘೋಷಣೆ ಮಾಡಲಾಯಿತು.
ಇದನ್ನೂ ಓದಿ: ರೈಲ್ವೆ ಸಮಸ್ಯೆಗಳಿಗೆ ಶೀಘ್ರ ಮುಕ್ತಿ | ಕೆ.ಸಿ.ವೀರೇಂದ್ರ (ಪಪ್ಪಿ)
ಈ ವೇಳೆ ನಿರ್ದೇಶಕರಾದ ಎಚ್.ರುದ್ರಪ್ಪ, ಹರೀಶ್, ಸಿ.ಕರಿಯಪ್ಪ, ಈಶ್ವರ ಸ್ವಾಮಿ, ತಿಪ್ಪೇಸ್ವಾಮಿ ನಾಕೀಕೆರೆ, ಚಂದ್ರಪ್ಪ, ಜೆ.ಇ.ಈರಪ್ಪ, ಓಬಪ್ಪ, ಮಾಜಿ ಅಧ್ಯಕ್ಷರಾದ ಬಿ.ಶಿವಪ್ಪ, ಜಿ.ರುದ್ರಪ್ಪ ಹಾಗೂ ಸಿಇಓ ಟಿ.ಜಿ.ರಂಗಸ್ವಾಮಿ ಹಾಗೂ ಸಿಬ್ಬಂದಿ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
