CHITRADURGA NEWS | 07 AUGUST 2025
ಹೊಳಲ್ಕೆರೆ: ಉಪ್ಪರಿಗೇನಹಳ್ಳಿ ಗ್ರಾಮದ ಹತ್ತಿರ 5 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್ಡ್ಯಾಂಗೆ ಶಾಸಕ ಎಂ.ಚಂದ್ರಪ್ಪ ಬಾಗಿನ ಸಲ್ಲಿಸಿದರು.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಮಟ್ಟ | ಇಂದಿನ ಒಳಹರಿವು ಎಷ್ಟು ?
ನಂತರ ಮಾತನಾಡಿದ ಶಾಸಕರು, ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತವಾಗಿ ಬಸ್ಗಳನ್ನು ಬಿಡುತ್ತೇನೆಂದು ಹೇಳಿದರು.
ಈ ಭಾಗದಲ್ಲಿ ಎಲ್ಲಾ ಕಡೆ ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಿದೆ.
ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರಲು 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಎಲ್ಲಾ ಕಡೆ ಸಿ.ಸಿ.ರಸ್ತೆ, ಕೆರೆಗಳ ಅಭಿವೃದ್ದಿ, ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ಕೆರೆಗಳಿಗೆ ನೀರು ತುಂಬಿಸಲು ಇನ್ನೂರು ಕೋಟಿ ರೂ. ಮುನ್ನೂರರಿಂದ ನಾಲ್ಕು ನೂರು ರೂ.ಗಳನ್ನು ಚೆಕ್ಡ್ಯಾಂ ಕಟ್ಟಲು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಗ್ರಾಮಸ್ಥ ಚಂದ್ರಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ, ಸದಸ್ಯರುಗಳಾದ ಸುರೇಶ್, ಪ್ರವೀಣ್, ಚಂದ್ರಣ್ಣ, ಹನುಮಂತರಾಜು, ನಟರಾಜ್, ಬೋರಣ್ಣ, ಗಿರೀಶ್, ಮನು, ಗುತ್ತಿಗೆದಾರ ಹೆಚ್.ಜಗದೀಶ್ ಹಾಗೂ ರೈತರು, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

