ಮುಖ್ಯ ಸುದ್ದಿ
Upper Bhadra Project: ಭದ್ರಾ ಮೇಲ್ದಂಡೆ | 25 ರಂದು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ
CHITRADURGA NEWS | 23 JULY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಕಾಮಗಾರಿಯ ಪ್ರಗತಿ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜುಲೈ 25ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ಅಜ್ಜಂಪುರ ಬಳಿ ನಾಲೆ ನಿರ್ಮಾಣ ಕಾರ್ಯ ಸ್ಥಗಿತವಾಗಿದ್ದರಿಂದ ಕ್ಷೇತ್ರದ 46 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೆಲ ವರ್ಷಗಳಿಂದ ಕುಂಠಿತವಾಗಿದೆ. ಇದೀಗ ಸಮಸ್ಯೆ ಬಗೆಹರಿದಿದ್ದು, ಮುಂದಿನ ಪ್ರಗತಿ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕಿನ ಕೋನಸಾಗರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ
ಜಲಜೀವನ್ ಯೋಜನೆಯಲ್ಲಿ ತುಂಗಭದ್ರಾ ಹಿನ್ನೀರು ಯೋಜನೆ ಮೂಲಕ ಶುದ್ಧ ಕುಡಿಯುವ ನೀರು ನೀಡಲಾಗುವುದು. ಹಿನ್ನೀರು ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಯೋಜನೆಯಾಗಿದೆ. ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆ ಉದ್ಘಾಟಿಸುವ ಸಾಧ್ಯತೆ ಇದೆ ಎಂದು ವಿವರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ, ತಹಶೀಲ್ದಾರ್ ಟಿ.ಜಗದೀಶ್, ಅಧಿಕಾರಿಗಳಾದ ಹರೀಶ್, ಪ್ರಕಾಶ್, ನವೀನ್, ಸಿದ್ದಮ್ಮ ಇದ್ದರು.