
CHITRADURGA NEWS | 28 JULY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ (Upper Bhadra Project ) ಚಿತ್ರದುರ್ಗ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ 8 ಕೆರೆಗಳಿಗೆ ನೀರು ತುಂಬಿಸಲು ಆದೇಶ ನೀಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಈಚೆಗೆ ನಡೆದ ವಿಶ್ವೇಶ್ವರಯ್ಯ ಜಲ ನಿಗಮದ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ‘ಸರ್ಕಾರದ ಯಾವುದೇ ಯೋಜನೆ ಬಂದರು ಚಿತ್ರದುರ್ಗದ ಹೆಸರು ಕೇಳಿ ಬರುತ್ತಿದೆ. ಆದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಹೆಚ್ಚಿನ ಪ್ರಯೋಜ ಆಗುತ್ತಿಲ್ಲ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದನ್ನು ಮೊದಲು ಸರಿಪಡಿಸಬೇಕು’ ಎಂದರು.
ಇದನ್ನೂ ಓದಿ:ವರುಣಾರ್ಭಟಕ್ಕೆ ಮಲೆನಾಡು ತತ್ತರ | ಬಯಲುಸೀಮೆಯಲ್ಲಿ ಮಳೆಗೆ ಪ್ರಾರ್ಥನೆ
‘ಈ ಹಿಂದೆ ಕ್ಷೇತ್ರ ವ್ಯಾಪ್ತಿಯ 5 ಕೆರೆಗಳಿಗೆ ನೀರು ತುಂಬಿಸಲು ಆದೇಶವಾಗಿದೆ. ಆದರೆ ಉಳಿದ 8 ಕೆರೆಗಳಿಗೆ ನೀರು ತುಂಬಿಸದಿದ್ದರೆ ಜನರು ಸಮಸ್ಯೆಗೆ ಸಿಲುಕುತ್ತಾರೆ. ಕೂಡಲೇ 8 ಕೆರೆಗಳಿಗೆ ನೀರು ತುಂಬಿಸಲು ಆದೇಶಿಸಬೇಕು’ ಎಂದು ಒತ್ತಾಯಿಸಿದರು.
ಶಾಸಕರ ಮಾತು ಆಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 8 ಕೆರೆಗಳಿಗೆ ನೀರು ತುಂಬಿಸಲು ಡಿಪಿಆರ್ ಸಿದ್ಧಗೊಳಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿ, ಶೀಘ್ರ ನೀರು ತುಂಬಿಸಲು ಆದೇಶ ಮಾಡಲಾಗುತ್ತದೆ’ ಎಂದು ಭರವಸೆ ನೀಡಿದರು.
ಸಭೆಯಲ್ಲಿ ವಿಶ್ವೇಶ್ವರಯ್ಯ ಜಲನಿಗಮ ವ್ಯಾಪ್ತಿಗೆ ಬರುವ ಶಾಸಕರು, ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
