ಮುಖ್ಯ ಸುದ್ದಿ
ಭದ್ರಾ ಮೇಲ್ದಂಡೆ ಅನುದಾನಕ್ಕೆ | ಸಂಸದರ ನಿಯೋಗದಿಂದ ಮನವಿ

CHITRADURGA NEWS | 19 DECEMBER 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವು ಶೀಘ್ರ ಬಿಡುಗಡೆಗೆ ಒತ್ತಾಯಿಸಿ ರಾಜ್ಯದ ಸಂಸದರ ನಿಯೋಗ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿದೆ.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿ ಅನುಷ್ಟಾನಗೊಳ್ಳುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಟಾನಕ್ಕಾಗಿ ಕೇಂದ್ರದ ಸರ್ಕಾರ ಬಜೆಟ್‍ನಲ್ಲಿ ಘೋಷಣೆ ಮಾಡಿರುವ ರೂ.5300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾದ ಪ್ರಲ್ಹಾದ್ ಜೋಷಿ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ರಾಜ್ಯದ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿ ಮನವಿ ಮಾಡಿತು.ಸಂಸದ ಗೋವಿಂದ
ಕಾರಜೋಳ ಮಾತನಾಡಿರುವ ವೀಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ: https://youtube.com/shorts/LMK-djGbO08?feature=share
ಈ ವೇಳೆ ಸಂಸದರಾದ ಡಾ.ಕೆ.ಸುಧಾಕರ್, ಪಿ.ಸಿ.ಗದ್ದಿಗೌಡರ್, ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದರು.
