
CHITRADURGA NEWS | 27 AUGUST 2024
ಹೊಸದುರ್ಗ: ತಾಲೂಕಿನ ಲಕ್ಕಿಹಳ್ಳಿ ಗ್ರಾಮದಲ್ಲಿ ದೇವರ ಹಲಗೆ ಸೇವೆ ವಿಚಾರವಾಗಿ ಗುಂಪು ಘರ್ಷಣೆ ನಡೆದಿದ್ದು, ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಹಲಗೆ ಸೇವೆ ವಿಚಾರವಾಗಿ ಒಂದು ಗುಂಪು ಹಲ್ಲೆ ನಡೆಸಿದ ಎಂದು ಸೋಮಶೇಖರ್ ಎಂಬುವವರು ಹೊಸದುರ್ಗ (Hosadurga) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ತೀವ್ರ ಹಲ್ಲೆಯಿಂದ ಹೊಸದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮಶೇಖರ್ ವಿರುದ್ಧ ಲಕ್ಕಮ್ಮ ಎಂಬುವವರು ಪ್ರತಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಈ ರಾಶಿಯವರಿಗೆ ಇಂದು ಅದೃಷ್ಟದ ದಿನ
ದೇವಸ್ಥಾನದಲ್ಲಿ ಗಲಾಟೆ ನಡೆಯುತ್ತಿರುವ ವೀಡಿಯೋ ಸೋಷಿಯಲ್ದ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಗ್ರಾಮದ ಶ್ರೀ ಮುದ್ದುಲಿಂಗೇಶ್ವರ ದೇವರ ವೀರಗಾರರ ಪಟ್ಟವನ್ನು 20 ವರ್ಷಗಳ ಹಿಂದೆಯೇ ಕೊಟ್ಟಿದ್ದು, ಅದರಂತೆ ದೈನಂದಿನ ಪೂಜೆ ಮಾಡಿಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀಧಿಗೆ ನಿರ್ಧಾರ
ಭಾನುವಾರ ರಾತ್ರಿ ದೇವರ ಪೂಜೆ ಮುಗಿಸಿ ಹಲಗೆ ಸೇವೆ ಮಾಡಲು ಮುಂದಾದಗ ಒಂದು ಗುಂಪು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದೆ ಎಂದು ಸೋಮಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಚನ್ನಗಿರಿ ಶಿವಮೊಗ್ಗ ಮಾರುಕಟ್ಟೆಗಳ ಅಡಿಕೆ ರೇಟ್
ದೇವಸ್ಥಾನದ ಕಟ್ಟುಪಾಡುಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವುದರಿಂದ ಸೋಮಶೇಖರ್ ಅವರಿಗೆ ಹಲಗೆ ಸೇವೆ ಮಾಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕ ಸಲ ಹೇಳಿದರೂ ಕೇಳದ ವಾಗ್ವಾದ ಮಾಡುತ್ತಿದ್ದಾರೆ. ಪ್ರಶ್ನಿಸಿದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸೋಮಶೇಖರ್ ವಿರುದ್ಧ ಲಕ್ಕಮ್ಮ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
2018ರಲ್ಲಿ ಗ್ರಾಮದ ಎರಡು ಸಮುದಾಯಗಳ ನಡುವೆ ದೇವರ ಸೇವೆ ವಿಚಾರವಾಗಿ ನಡೆದ ಗಲಾಟೆ ನಡೆದು ಪ್ರಕರಣ ನ್ಯಾಯಾಲಯದಲ್ಲಿದೆ. ಇದೇ ವಿಚಾರವಾಗಿ ಪದೇ ಪದೇ ಗುಂಪು ಗಲಭೆ ನಡೆಯುತ್ತಿದ್ದು, ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಮಧ್ಯೆ ಪ್ರವೇಶಿಸಬೇಕು ಎಂದು ಗ್ರಾಮದ ಇತರೆ ವರ್ಗಗಳ ಕೋರಿಕೆಯಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
