
CHITRADURGA NEWS | 24 JUNE 2025
ಚಿತ್ರದುರ್ಗ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Also Read: ಅಡಿಕೆ ಧಾರಣೆ | ಜೂನ್ 23 | ಯಾವ ಅಡಿಕೆಗೆ ಎಷ್ಟು ರೇಟ್
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಮೀರಿರಬಾರದು.
ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯು ಕಳೆದ 03 ವರ್ಷಗಳಲ್ಲಿ ಕನಿಷ್ಟ ಒಂದು ಬಾರಿಯಾದರೂ ಯುಪಿಎಸ್‍ಸಿ, ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಬೇಕು.
Also Read: ಚಿತ್ರದುರ್ಗದ ಮುಖ್ಯ ರಸ್ತೆಗೆ ನರೇಂದ್ರ ಮೋದಿ ಹೆಸರು ನಾಮಕರಣ
ಅಭ್ಯರ್ಥಿಯ ವಯೋಮಿತಿ ಕನಿಷ್ಟ 21 ಹಾಗೂ ಗರಿಷ್ಟ 35 ವರ್ಷಗಳು ಮೀರಿರಬಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
