
CHITRADURGA NEWS | 04 JULY 2025
ಚಿತ್ರದುರ್ಗ: 2025-26ನೇ ಸಾಲಿಗೆ ಯುಪಿಎಸ್‍ಸಿ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಪಿ ಗ್ರೂಪ್ ಸಿ, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.
Also Read: ನ್ಯಾಯಾಲಯಕ್ಕೆ ಹಾಜರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು

ಅರ್ಜಿಗಳನ್ನು ಸೇವಾಸಿಂಧು ವೆಬ್‍ಸೈಟ್ https://sevasindhu.karnataka.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು: ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಅಭ್ಯರ್ಥಿಯ ವಯೋಮಿತಿ ಯುಪಿಎಸ್‍ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಸಿ ಗ್ರೂಪ್ ಸಿ ತರಬೇತಿಗೆ 21 ಹಾಗೂ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗೆ ಕನಿಷ್ಟ 18 ಹಾಗೂ ಗರಿಷ್ಟ 30 ವರ್ಷಗಳು ಮೀರಿರಬಾರದು.
Also Read: ಜಿಲ್ಲಾಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರ | DHO ಡಾ.ರೇಣುಪ್ರಸಾದ್ ಸಾಂಕೇತಿಕ ಚಾಲನೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್, ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
