CHITRADURGA NEWS | 19 JULY 2026
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಯುಪಿಎಸ್‍ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 03 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ
ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗುಂಪಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿ ನೀಡಲಾಗುವುದು.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ಪದವಿ ಪಡೆದಿದ್ದು, ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 5 ಲಕ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಉಚಿತ ಊಟ ಮತ್ತು ವಸತಿ ಸೌಲಭ್ಯ ಇರುವುದರಿಂದ ಪ್ರತ್ಯೇಕವಾಗಿ ಯಾವುದೇ ತರಬೇತಿ ಭತ್ಯೆ ನೀಡಲಾಗುವುದಿಲ್ಲ.
ಇದನ್ನೂ ಓದಿ: ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.
ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 8050770004 ಕ್ಕೆ ಕರೆ ಮಾಡಿ (ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ, ರಜಾದಿನಗಳನ್ನು ಹೊರತುಪಡಿಸಿ) ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

