
CHITRADURGA NEWS | 03 JANUARY 2026
ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರುಗಳು ಇದೇ ಜನವರಿ 04 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗಾರಿ ಪರಿವೀಕ್ಷಣೆ ಮಾಡುವರು.
ಇದನ್ನೂ ಓದಿ: ಮುರುಘಾಮಠದಲ್ಲಿ ಮೇದಾರ ಕೇತಯ್ಯನವರ ಜಯಂತಿ ಆಚರಣೆ
ಜ.04 ರಂದು ಬೆಳಿಗ್ಗೆ 10.30 ಕ್ಕೆ ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮದ ವಿ.ವಿ.ಸಾಗರ ಜಲಾಶಯ ಬಾಗಿನ ಅರ್ಪಣೆ, ಮಧ್ಯಾಹ್ನ 12 ರಿಂದ ಚಿಕ್ಕಸಿದ್ದವ್ವನಹಳ್ಳಿ ಕಾಲುವೆ ನಿರ್ಮಾಣ ಕಾಮಗಾರಿ, ಕುಂಚಿಗನಾಳ್ ಅಕ್ವಡೆಕ್ಟ್, ಸೇತುವೆ ನಿರ್ಮಾಣ ಕಾಮಗಾರಿ ಮತ್ತು ಗೋನೂರು ಸೇತುವೆ ನಿರ್ಮಾಣ ಕಾಮಗಾರಿ ಪರಿವೀಕ್ಷಣೆ ಮಾಡುವರು.
ಮಧ್ಯಾಹ್ನ 2 ರಿಂದ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
