
CHITRADURGA NEWS | 20 SEPTEMBER 2024
ಚಿತ್ರದುರ್ಗ: ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ(City Council) ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: Adike: ಭೀಮಸಮುದ್ರದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಅಲ್ಪ ಏರಿಕೆ

ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ ಸ್ವಚ್ಚಗೊಳಿಸಿದ ನಿವೇಶನಗಳಲ್ಲಿ ಕಳೆದ ತಿಂಗಳು ಸುರಿದ ಮಳೆಗೆ ಮತ್ತೆ ಗಿಡ ಗಂಟೆಗಳು ಬೆಳೆದಿದ್ದು, ವಿಷಜಂತುಗಳು ಕಾಣಿಸುತ್ತಿರುವ ಬಗ್ಗೆ ಸಾರ್ವಜನಿಕರು ನಗರಸಭೆಗೆ ಮೌಖಿಕವಾಗಿ ದೂರು ನೀಡುತ್ತಿದ್ದಾರೆ.
ನಿವೇಶನದ ಮಾಲೀಕರ ಮಾಹಿತಿ ಲಭ್ಯವಿದ್ದವರಿಗೆ ನಗರಸಭೆಯಿಂದ ನೋಟೀಸ್ ನೀಡಿ ಸ್ವಚ್ಛಗೊಳಿಸಲು ತಿಳಿಸಲಾಗಿರುತ್ತದೆ. ಇನ್ನೂ ಕೆಲವು ನಿವೇಶನಗಳ ಮಾಲೀಕರ ವಿವರ ದೊರೆತಿರುವುದಿಲ್ಲ.
ಕ್ಲಿಕ್ ಮಾಡಿ ಓದಿ: PM Vishwakarma; ಪಿಎಂ ವಿಶ್ವಕರ್ಮ ಯೋಜನೆ | ರೂ.3 ಲಕ್ಷದವರೆಗೂ ಸಾಲ ಸೌಲಭ್ಯ
ಆದ್ದರಿಂದ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಚಗೊಳಿಸಿಕೊಂಡು ಕಾಂಪೌಡ್ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ನಿವೇಶನಕ್ಕೆ ಸಂಬಂಧಪಟ್ಟ ಮಾಲೀಕರ ಹೆಸರು, ವಿಳಾಸ, ಖಾತೆ ಅಥವಾ ಅಸೆಸ್‌ಮೆಂಟ್ ಸಂಖ್ಯೆ, ಪಿ.ಐ.ಡಿ ನಂ, ಮೊಬೈಲ್ ನಂಬರ್‌ಗಳನ್ನೊಳಗೊಂಡ ನಾಮಫಲಕ ಹಾಕಿಕೊಳ್ಳುವಂತೆ ಕೋರಿದ್ದಾರೆ.
ಒಂದು ವೇಳೆ ನಿವೇಶನಗಳನ್ನು ಸ್ವಚ್ಚಗೊಳಿಸದಿದ್ದಲ್ಲಿ ನಗರಸಭೆಯಿಂದ ಸ್ವಚ್ಚಗೊಳಿಸಿ, ಸ್ವಚ್ಚಗೊಳಿಸಲು ತಗಲುವ ವೆಚ್ಚದ ಎರಡುಪಟ್ಟು ಮೊತ್ತವನ್ನು ದಂಡ ವಿಧಿಸಿ ವಸೂಲಿ ಮಾಡಲಾಗುವುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
