CHITRADURGA NEWS | 03 JANUARY 2025
ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 04 ತಾಲ್ಲೂಕುಗಳ 06 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ 01 ತಾಲ್ಲೂಕಿನ ಪುರಸಭೆಯಲ್ಲಿ ಖಾಲಿ ಇರುವ ವಿಕಲಚೇತನರ ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಜ.17 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಪತ್ರಕರ್ತರಿಗೆ ಪ್ರಶಸ್ತಿಗಳ ಮಳೆ | ರಾಜ್ಯಮಟ್ಟದ ಪುರಸ್ಕಾರಕ್ಕೆ ಐದು ಜನ ಆಯ್ಕೆ
ಚಿತ್ರದುರ್ಗ ತಾಲ್ಲೂಕಿನ ತುರುವನೂರು, ಅನ್ನೇಹಾಳ್, ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ, ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿ, ಹಿರಿಯೂರು ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮ ಪಂಚಾಯಿತಿ, ಹೊಸದುರ್ಗ ತಾಲ್ಲೂಕಿನ ಜಾನಕಲ್ಲು ಗ್ರಾಮ ಪಂಚಾಯಿತಿಯಲ್ಲಿ ಗಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯೂ) ಹುದ್ದೆಗೆ ಹಾಗೂ ಹೊಳಲ್ಕೆರೆ ಪುರಸಭೆ (ವಾರ್ಡ್ ನಂ.01 ರಿಂದ 17 )ಯಲ್ಲಿ ಖಾಲಿ ಇರುವ ನಗರ ಪುನರ್ವಸತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾಸಿಕ ರೂ.9000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತರಿರುವ ಆಯಾ ಗ್ರಾಮ ಪಂಚಾಯಿತಿ, ಆಯಾ ನಗರ ವ್ಯಾಪ್ತಿಯ 18 ರಿಂದ 45 ವರ್ಷ ವಯೋಮಾನದ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಹಾಗೂ ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು.
ಕ್ಲಿಕ್ ಮಾಡಿ ಓದಿ: ಬಂಡೆ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ | ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ
ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
