CHITRADURGA NEWS | 01 MARCH 2024
ಚಿತ್ರದುರ್ಗ: ಜಿಲ್ಲೆಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಅಭಿನವ್ ಹೇಳಿದರು.
ಇದನ್ನೂ ಓದಿ: ನಕಲಿ ಐಎಸ್‍ಐ ಮಾರ್ಕ್ ಬಳಕೆ | ರೋಲ್ ಪೈಪ್ ಉತ್ಪಾಧನಾ ಘಟಕಗಳ ಮೇಲೆ ಬಿಐಎಸ್ ಅಧಿಕಾರಿಗಳ ದಾಳಿ | ಭಾರೀ ಪ್ರಮಾಣದ ಪೈಪ್ ವಶಕ್ಕೆ

ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ ನಗರದ ನಗರ ಆರೋಗ್ಯ ಕೇಂದ್ರಗಳ ಎಲ್ಲಾ ಮೇಲ್ವಿಚಾರಣಾ ತಂಡಗಳ ಮೇಲ್ವಿಚಾರಕರಿಗೆ ಪುನರ್-ಮನನ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಒಟ್ಟು 1213 ತಂಡಗಳನ್ನು ರಚಿಸಿಕೊಂಡು ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆ ಹಾಕಲಾಗುವುದು.
ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ 259 ಮೇಲ್ವಿಚಾರಕರನ್ನು ನೇಮಿಸಿದೆ. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೊ ಹನಿ ಹಾಕಿಸಿದ್ದರೂ ಪುನಃ ಮಾರ್ಚ್ 3 ರಿಂದ 6 ರವರೆಗೆ ಪೋಲಿಯೊ ಹಾಕಿಸಲು 1,35,105 ಮಕ್ಕಳನ್ನು ಗುರುತಿಸಲಾಗಿದೆ ಎಂದರು.
ಇದನ್ನೂ ಓದಿ: ಮಾರ್ಚ್ 01 ರಂದು ಯುವ ಸೌರಭ ಕಾರ್ಯಕ್ರಮ
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ಗಿರೀಶ್ ಮಾತನಾಡಿ, ನಗರ ಪ್ರದೇಶಗಳಲ್ಲಿ ಲಸಿಕೆ ನೀಡುವಾಗ ಎಲ್ಲಾ ಸೂಕ್ಷ್ಮತೆಗಳನ್ನು ತಪ್ಪದೇ ಪರಿಶೀಲಿಸಿ. ವಲಸೆ ಕಾರ್ಮಿಕರು ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡಿದ್ದಾರೆ, ಕಟ್ಟಡ ಕಾರ್ಮಿಕರ ಮಕ್ಕಳಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಗರೂಕರಾಗಿ ಮಕ್ಕಳನ್ನು ಗುರುತಿಸಿ ಲಸಿಕೆ ಪಡೆಯುವಂತೆ ಮಾಡಿ ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಶನಿವಾರ ಬೆಳಿಗ್ಗೆ ಶಾಲಾ ಮಕ್ಕಳಿಂದ ಪಲ್ಸ್ ಪೋಲಿಯೊ ಜಾಗೃತಿ ಜಾಥ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸಂಬಂಧಿಸಿದ ವಾರ್ಡ್, ಶಾಲೆಗಳಿಗೆ ಭೇಟಿ ನೀಡಿ ಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳಬೇಕು. ಈಗಾಗಲೇ ಮಾಹಿತಿ ಶಿಕ್ಷಣ ಸಂವಹನಕ್ಕೆ ಸಂಬಂಧಿಸಿದ ಪರಿಕರಗಳನ್ನು ವಿತರಿಸಲಾಗಿದೆ ಎಂದರು.
ಇದನ್ನೂ ಓದಿ: ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ಮೊಹಮ್ಮದ್ ಅಲಿ ಹಬೀಬ್, ಆಶಾ ಬೋಧಕಿ ಗುರುಲಿಂಗಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗಂಗಾಧರ್, ರಂಗಾ ರೆಡ್ಡಿ ಪ್ರವೀಣ್, ಗೋಪಾಲಕೃಷ್ಣ, ಗುರುಮೂರ್ತಿ, ಶ್ರೀನಿವಾಸ್ ಮಳಲಿ, ತಿಪ್ಪೇಸ್ವಾಮಿ, ಪ್ರಸನ್ನ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
