
CHITRADURGA NEWS | 23 JUNE 2026
ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಜುಲೈ 2ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನವನ್ನು “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ಯನ್ನಾಗಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಚಿತ್ರದುರ್ಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಇದನ್ನೂ ಓದಿ: ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಸರ್ಕಾರದ ಆದೇಶ ಮತ್ತು ನಿರ್ದೇಶನದಂತೆ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ”ಯನ್ನು ಯಶಸ್ವಿಯಾಗಿ ಆಚರಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಕಾರ್ಯಕ್ರಮ ಯಾವ ರೀತಿ ಆಯೋಜಿಸಬೇಕು ಹಾಗೂ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸೂಕ್ತ-ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕೋರಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿಯವರ ಕೊಡುಗೆ ಅತ್ಯಮೂಲ್ಯ. ಈ ನಿಟ್ಟಿನಲ್ಲಿ ವಚನ ಸಾಹಿತ್ಯ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜೀವನ ಕುರಿತು ಕವಿಗೋಷ್ಠಿ ಆಯೋಜಿಸುವಂತೆ ಸಲಹೆ ನೀಡಿದ ಅವರು, ಕವಿಗೋಷ್ಠಿಯಲ್ಲಿ ಭಾಗವಹಿಸಿದವರಿಗೆ ಪುಸ್ತಕ ಹಾಗೂ ಪ್ರಮಾಣ ಪತ್ರ ವಿತರಿಸಿ ಗೌರವಿಸೋಣ ಎಂದು ಸಲಹೆ ನೀಡಿದರು. ಇದಕ್ಕೆ ಸಭೆಯು ಒಪ್ಪಿಗೆ ಸೂಚಿಸಿತು.
ಇದನ್ನೂ ಓದಿ: ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 02ರಂದು ಬೆಳಿಗ್ಗೆ 11ಕ್ಕೆ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮಳಲಿ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ ಸ್ವಾಮಿ, ಜಿಲ್ಲಾ ಪಂಚಾಯಿತಿಯ ದಾದಾಪೀರ್, ನಗರಸಭೆಯ ಪುಟ್ಟಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

