ಮುಖ್ಯ ಸುದ್ದಿ
ಏಪ್ರಿಲ್ 14 ರಂದು ವದ್ದೀಕೆರೆ ಸಿದ್ದೇಶ್ವರಸ್ವಾಮಿ ಬ್ರಹ್ಮರಥೋತ್ಸವ

CHITRADURGA NEWS | 28 MARCH 2025
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ವದ್ದೀಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರಸ್ವಾಮಿ ಯಾನೆ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ 2025ರ ಏಪ್ರಿಲ್ 11 ರಿಂದ 16 ರವರೆಗೆ ನಡೆಯಲಿದ್ದು, ಏ.14ರಂದು ಬ್ರಹ್ಮ ರಥೋತ್ಸವ ನಡೆಯಲಿದೆ.
Also Read: ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ | ಉತ್ತಮ ನಿರ್ಧಾರ ಎಚ್.ಆಂಜನೇಯ
ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಏ.11ರಂದು ರಾತ್ರಿ 8 ಗಂಟೆಗೆ ಕಂಕಣಧಾರಣೆ, ಏ.12ರಂದು ರಾತ್ರಿ 7 ಗಂಟೆಗೆ ಅಗ್ನಿಕುಂಡ, ಏ.13ರಂದು ರಾತ್ರಿ 8 ಗಂಟೆಗೆ ಚಿಕ್ಕ ರಥೋತ್ಸವ ಕಾರ್ಯ ಜರುಗಲಿದೆ. ಏ.14ರಂದು ಮಧ್ಯಾಹ್ನ 3.30ಕ್ಕೆ ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಜಾನಪದ ಕಲಾವಿದರಿಂದ ವೈವಿದ್ಯಮಯ ಮೆರವಣಿಗೆ ನಡೆಯಲಿದ್ದು, ಅದೇ ದಿನ ಸಂಜೆ 4.30ಕ್ಕೆ ಬ್ರಹ್ಮ ರಥೋತ್ಸವ ಜರುಗಲಿದೆ.
Also Read: KSRTC ಬಸ್ ನಿಲ್ದಾಣದ ಅಂಗಡಿಗಳಲ್ಲಿ ಅವಧಿ ಮೀರಿದ ನೀರು ಮಾರಾಟ | ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ತೀವ್ರ ಅಸಮಾಧಾನ
ಏ.15ರಂದು ಉಂಡೆ, ಮಂಡೆ, ಸಿದ್ಧಭುಕ್ತಿ ಕಾರ್ಯ ಹಾಗೂ ಏ.16ರಂದು ಕಿರುಬಾನ, ವಸಂತೋತ್ಸವ ಮತ್ತು ಸಂಜೆ 6ಕ್ಕೆ ಕಂಕಣ ವಿಸರ್ಜನೆ ಕಾರ್ಯ ನಡೆಯಲಿದೆ ಎಂದು ಹಿರಿಯೂರು ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿ ಸಿ.ರಾಜೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
