Connect with us

Anjaneya Swamy festival; ಕಣಿವೆ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ | ಶ್ರಾವಣ ಮಾಸದ ವಿಶೇಷ ಪೂಜೆ ಉತ್ಸವ

ಕಣಿವೆ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ

ಮುಖ್ಯ ಸುದ್ದಿ

Anjaneya Swamy festival; ಕಣಿವೆ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ | ಶ್ರಾವಣ ಮಾಸದ ವಿಶೇಷ ಪೂಜೆ ಉತ್ಸವ

CHITRADURGA NEWS | 10 AUGUST 2024

ಚಿತ್ರದುರ್ಗ: ಶ್ರಾವಣ ಮಾಸದ ಅಂಗವಾಗಿ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಇಂದು ಶ್ರಾವಣದ ಮೊದಲ ಶನಿವಾರದ ಹಿನ್ನೆಲೆಯಲ್ಲಿ ಬಹುತೇಕ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಿ ಪೂಜೆ, ಅರ್ಚನೆ, ಪ್ರಸಾದ ವಿತರಣೆ ನಡೆಯಿತು.

ಕ್ಲಿಕ್ ಮಾಡಿ ಓದಿ: Tourist spot; ನಮ್ಮೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ವೋಟ್ ಮಾಡಿ | ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ಇಲ್ಲಿದೆ ನೋಡಿ

ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ:

ಚಿತ್ರದುರ್ಗ ನಗರದ ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಬೆಳಗ್ಗೆಯಿಂದಲೇ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಯಿತು.

ದೇವಸ್ಥಾನಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದಾಂಗುಡಿ ಇಟ್ಟಿದ್ದರು. ಸರತಿ ಸಾಲಿನಲ್ಲಿ ಬ್ಯಾಚ್ ಮಾಡಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಆಂಜನೇಯಸ್ವಾಮಿ

ದೇವಸ್ಥಾನಕ್ಕೆ ಆಗಮಿಸಿದ ಎಲ್ಲ ಭಕ್ತರಿಗೂ ಪಾಯಸ, ಫಲಾವ್ ಪ್ರಸಾದ ವಿತರಣೆಯನ್ನು ಇಡೀ ದಿನ ಹಮ್ಮಿಕೊಳ್ಳಲಾಗಿದೆ. ಶ್ರಾವಣ ಮಾಸದ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.

ಜೈ ಆಂಜನೇಯ, ಶ್ರೀರಾಮ ಜಯರಾಮ ಜಯಜಯ ರಾಮ ಎಂಬ ಘೋಷಣೆಗಳೊಂದಿಗೆ ನೂರಾರು‌ ಭಕ್ತರು ಶ್ರೀರಾಮ, ಹನುಮರ ಪಲ್ಲಕ್ಕಿ ಹೊತ್ತು ಮೆರವಣಿಗೆ ನಡೆಸಿದರು.

ಕ್ಲಿಕ್ ಮಾಡಿ ಓದಿ: crop insurance; ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆವಿಮೆ ನೋಂದಣಿ | ಆಗಸ್ಟ್ 16 ಕೊನೆ ದಿನ 

ತಮಟಕಲ್ಲು ಆಂಜನೇಯಸ್ವಾಮಿಗೆ ವಿಶೇಷ ಪೂಜೆ:

ಚಿತ್ರದುರ್ಗ ನಗರ ಹೊರವಲಯದ ತಮಟಕಲ್ಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರಟವಣ ಮಾಸದ ಅಂಗವಾಗಿ ಸಾವಿರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಚಿತ್ರದುರ್ಗದ ಸ್ಟೇಡಿಯಂ ರಸ್ತೆ, ಜೆಸಿಆರ್, ಹೊಳಲ್ಕೆರೆ ರಸ್ತೆ ಸೇರಿದಂತೆ ಎಲ್ಲ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ‌ ಮೊದಲ ಶ್ರಾವಣ ಶನಿವಾರದ ಪೂಜೆಗಳು ನಡೆದವು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version